ಮಂಗಳೂರು: ಆಶಾ ಕಾರ್ಯಕರ್ತೆಗೆ ನಿಂದಿಸಿ, ಬೆದರಿಕೆ, ಇಬ್ಬರು ಆರೋಪಿಗಳ ಬಂಧನ
ಕರ್ತವ್ಯ ನಿರತ ಆರೋಗ್ಯ ಕಾರ್ಯಕರ್ತೆಗೆ ಬೆದರಿಕೆ ಹಾಕಿದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು,: ಕರ್ತವ್ಯ ನಿರತ ಆರೋಗ್ಯ ಕಾರ್ಯಕರ್ತೆಗೆ ಬೆದರಿಕೆ ಹಾಕಿದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಅಮ್ಟಾಡಿ ನಿವಾಸಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ ಬಂಧಿತ ಆರೋಪಿಗಳು.
ಇದೇ ಮಾರ್ಚ್ ಒಂದರಂದು ಆರೋಗ್ಯ ಇಲಾಖೆಯ ಅಡಿಯಲ್ಲಿ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ಅಮ್ಟಾಡಿ ಗ್ರಾಮದ ತುಳಸಿ (48) ಎಂಬವರು ಕೊರೋನಾ ವೈರಸ್ ಮುಂಜಾಗೃತಾ ಕರ್ತವ್ಯದ ನಿಮಿತ್ತ ವಿದೇಶದಿಂದ ಆಗಮಿಸಿರುವ ಕಿನ್ನಿಬೆಟ್ಟು ಪರಿಸರದ ನಿತೇಶ ಹಾಗೂ ಕಲಾಯಿ ಪರಿಸರದ ಜಯಂತ ಎಂಬವರ ಆರೋಗ್ಯವನ್ನು ಮೊಬೈಲ್ ಮೂಲಕ ಕರೆ ಮಾಡಿ ವಿಚಾರಿಸಿದ್ದಾರೆ.
ಆ ದಿನ ಸಂಜೆ ಸಮಯ ಸುಮಾರು 6 ಗಂಟೆಗೆ ಕರ್ತವ್ಯದಲ್ಲಿದ್ದಾಗ ವಿದೇಶದಿಂದ ಆಗಮಿಸಿರುವ ನಿತೇಶ ಎಂಬಾತನ ಸಂಬಂಧಿ ಬಂಟ್ವಾಳ ಅಮ್ಟಾಡಿ ನಿವಾಸಿಗಳಾದ ಮಾರಪ್ಪ ಪೂಜಾರಿ ಹಾಗೂ ಉಮೇಶ ಎಂಬವರು ಆಶಾ ಕಾರ್ಯಕರ್ತೆಗೆ ಮೊಬೈಲ್ ಮೂಲಕ ಕರೆಮಾಡಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಆಶಾ ಕಾರ್ಯಕರ್ತೆಗೆ ಪೊಲೀಸರಿಗೆ ದೂರು ನೀಡಿದ್ದರು.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿನ್ನೆ ಆರೋಪಿಗಳನ್ನು ಬಂಧಿಸಿ ಮುಂದಿನ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


