ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಛಾಯಾಗ್ರಾಹಕ ಟಿ.ಎಲ್.ರಾಮಸ್ವಾಮಿ ವಿಧಿವಶ
ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಬೆಂಗಳೂರಿನ ಹಿರಿಯ ಛಾಯಾಗ್ರಾಹಕರಾಗಿದ್ದ ಟಿ.ಎಲ್.ರಾಮಸ್ವಾಮಿ(89) ವಿಧಿವಶರಾಗಿದ್ದಾರೆ. ಆರು ದಶಕಗಳ ಕಾಲ ಪತ್ರಿಕಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದ್ದ ರಾಮಸ್ವಾಮಿ ವಯೋಸಹಜ ಕಾಯಿಲೆಯಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು.

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಬೆಂಗಳೂರಿನ ಹಿರಿಯ ಛಾಯಾಗ್ರಾಹಕರಾಗಿದ್ದ ಟಿ.ಎಲ್.ರಾಮಸ್ವಾಮಿ(89) ವಿಧಿವಶರಾಗಿದ್ದಾರೆ. ಆರು ದಶಕಗಳ ಕಾಲ ಪತ್ರಿಕಾ ಛಾಯಾಗ್ರಾಹಕರಾಗಿ ಸೇವೆ ಸಲ್ಲಿಸಿದ್ದ ರಾಮಸ್ವಾಮಿ ವಯೋಸಹಜ ಕಾಯಿಲೆಯಿಂದ ಶುಕ್ರವಾರ ಬೆಳಿಗ್ಗೆ ನಿಧನರಾದರು.
ನಗರದ ಬನ್ನೇರುಘಟ್ಟ ರಸ್ತೆ ಅರೆಕೆರೆ ಸಮೀಪದ ಅವರ ಪುತ್ರನ ಮನೆಯಲ್ಲಿ ವಾಸವಿದ್ದ ರಾಮಸ್ವಾಮಿ ಪತ್ರಿಕಾ ಛಾಯಾಗ್ರಾಹಕರಾಗಿ ದೇಶ, ವಿದೇಶಗಳಲ್ಲಿ ಗೌರವಾದರಗಳಿಗೆ ಪಾತ್ರವಾಗಿದ್ದರು.
ಡೆಕ್ಕನ್ ಹೆರಾಲ್ಡ್-ಪ್ರಜಾವಾಣಿ ಬಳಗದಲ್ಲಿ ಸುಮಾರು ಮೂರು ದಶಕಕ್ಕೂ ಹೆಚ್ಚು ಕಾಲ ಚಾಯಾಗಾಹಕರಾಗಿ ಸೇವೆ ಸಲ್ಲಿಸಿದ್ದ ರಾಮಸ್ವಾಮಿ ಆ ನಂತರದಲ್ಲಿ ಮುಕ್ತ ಪತ್ರಿಕಾ ಛಾಯಾಗ್ರಾಹಕರಾಗಿ (ಫ್ರೀ ಲ್ಯಾನ್ಸ್) ಸಹ ಕೆಲಸ ಮಾಡಿದ್ದರು. ಮೈಸೂರು ನ್ಯೂಸ್ ಫೋಟೋಸ್ ಎಂಬ ಸಂಸ್ಥೆ ಸ್ಥಾಪಿಸಿದ್ದ ರಾಮಸ್ವಾಮಿ ಜಮ್ಮು ಹಾಗೂ ಪಂಜಾಬಿನ ಗಡಿಯಲ್ಲಿ ಯುದ್ಧ ವರದಿಯ ತರಬೇತಿಯನ್ನೂ ಪಡೆಇದ್ದರು.
ರಾಮಸ್ವಾಮಿಯವರ ಪ್ರಖ್ಯಾತಿಯನ್ನು, ಪತ್ರಿಕಾ ಕ್ಷೇತ್ರಕ್ಕೆ ಸೇವೆಯನ್ನೂ ಗುರುತಿಸಿ ಅವರಿಗೆ ಮಾದ್ಯಮ ಅಕಾಡಮಿ, ರಾಜ್ಯೋತ್ಸವ ಪ್ರಶಸ್ತಿ ಸೇರಿ ಅನೇಕ ಗೌರವಗಳು ಲಭಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


