ಬೆಂಗಳೂರಿನಲ್ಲಿ ಕತ್ತರಿಸಿದ ಹಣ್ಣುಗಳ ಮಾರಾಟಕ್ಕೆ ಅವಕಾಶವಿಲ್ಲ
ನಗರದಲ್ಲಿ ಜನರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಎಲ್ಲೆಂದರಲ್ಲಿ ಕತ್ತರಿಸಿಟ್ಟ ಹಣ್ಣು-ತರಕಾರಿ ಮಾರದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಬೆಂಗಳೂರು: ನಗರದಲ್ಲಿ ಜನರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಎಲ್ಲೆಂದರಲ್ಲಿ ಕತ್ತರಿಸಿಟ್ಟ ಹಣ್ಣು-ತರಕಾರಿ ಮಾರದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಬೆಂಗಳೂರು ನಗರದ ನಾಗರೀಕರಿಗೆ ಅಗತ್ಯವಾಗಿರುವ ಹಣ್ಣು, ತರಕಾರಿಗಳ ಕೊರತೆಯಾಗದಂತೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಕೃಷಿ ಸಚಿವ ಬಿಸಿ ಪಾಟೀಲ್ ಅವರು ಬಿಬಿಎಂಪಿ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಜನರ ಆರೋಗ್ಯಕ್ಕಾಗಿ ಹಲವು ಪ್ರಮುಖ ಕ್ರಮಗಳನ್ನು ಕೈಗೊಳ್ಳಲಾಯಿತು.
ಕತ್ತರಿಸಿದ ಹಣ್ಣುಗಳ ಮಾರಾಟ ಸಂಬಂಧ ಜನರಿಂದ ಅಭಿಪ್ರಾಯ ಸಂಗ್ರಹಿಸಬೇಕು ಎಂದು ಸೂಚಿಸಲಾಯಿತು. ಹಣ್ಣು, ತರಕಾರಿಗಳ ಕೊರತೆಯಾಗದಂತೆ ನೇರ ಮಾರುಕಟ್ಟೆಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಇಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅಧ್ಯಕ್ಷತೆಯಲ್ಲಿ ಬಿಬಿಎಂಪಿ ಮೇಯರ್ ಕೊಠಡಿಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ರಸ್ತೆ ಬದಿಯ ಸಸ್ಯಗಳಿಗೆ ಉಚಿತ ನೀರು ಪೂರೈಸಲು, ಹಾಪ್ ಕಾಮ್ಸ್ ಮೂಲಕ ರೈತರು ಬೆಳೆದ ಹಣ್ಣುಗಳನ್ನು ಖರೀದಿಸಲು ಜಾಹೀರಾತು ಪ್ರಕಟಣೆ ನೀಡಲು ಆರ್‌ಡಬ್ಲ್ಯೂಎ ಸಂಘಕ್ಕೆ ಸೂಚಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಹಾಪ್‌ಕಾಮ್ಸ್‌ಗಳಿಂದ ಹಣ್ಣುಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಅನುಮತಿ ಪಡೆಯಲು ಮಾತುಕತೆ ನಡೆಸಿ ಹಣ್ಣು ತರಕಾರಿ ಸರಬರಾಜು ಆರಂಭಿಸಲು ತೀರ್ಮಾನಿಸಲಾಗಿದೆ. ಅಲ್ಲದೆ ನಂದಿನಿ ಬೂತ್ ಗಳಲ್ಲೂ ಹಣ್ಣು ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಲು ಮತ್ತು ಹಾಪ್‌ಕಾಮ್ಸ್ ಗಳೊಂದಿಗೆ ಬಿಬಿಎಂಪಿ ವಾರ್‌ರೂಂನಲ್ಲಿ ನಾಳೆ ವೀಡಿಯೊ ಸಂವಾದ ನಡೆಸಲು ತೀರ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


