ಇಂದಿರಾ ಕ್ಯಾಂಟಿನ್ ನಲ್ಲಿ ಉಚಿತ ಊಟವಿಲ್ಲ: ಅಚ್ಚರಿ ಮೂಡಿಸಿದ ಸಿಎಂ ನಿರ್ಧಾರ
ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ ನೀಡುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.ಆರ್ಥಿಕ ಹೊರೆ ಹೆಚ್ಚುತ್ತಿರುವ ಹಿನ್ನೆಲೆಯೊಳಗೆ ಉಚಿತ ಊಟದ ಬದಲು ಹಿಂದೆ ಜಾರಿಯಲ್ಲಿದ್ದ ರಿಯಾಯಿತಿ ದರದಲ್ಲಿ ಊಟ–ಉಪಾಹಾರ ನೀಡಲು ಸರ್ಕಾರ ತೀರ್ಮಾನಿಸಿದೆ.

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ ನೀಡುವುದನ್ನು ನಿಲ್ಲಿಸಲು ಸರ್ಕಾರ ನಿರ್ಧರಿಸಿದೆ.ಆರ್ಥಿಕ ಹೊರೆ ಹೆಚ್ಚುತ್ತಿರುವ ಹಿನ್ನೆಲೆಯೊಳಗೆ ಉಚಿತ ಊಟದ ಬದಲು ಹಿಂದೆ ಜಾರಿಯಲ್ಲಿದ್ದ ರಿಯಾಯಿತಿ ದರದಲ್ಲಿ ಊಟ–ಉಪಾಹಾರ ನೀಡಲು ಸರ್ಕಾರ ತೀರ್ಮಾನಿಸಿದೆ.
ಕೊರೊನಾ ಸೋಂಕು ಹರಡಲು ಆರಂಭಿಸಿದ ಮೇಲೆ ಹೋಟೆಲ್‌ಗಳನ್ನು ಬಂದ್ ಮಾಡಲಾಗಿತ್ತು. ಈ ಹೊತ್ತಿನಲ್ಲಿ ಬಡವರು ಊಟಕ್ಕೆ ಪರದಾಡುವುದನ್ನು ತಪ್ಪಿಸಲು ಕೆಲವು ಕಡೆಗಳಲ್ಲಿ ಉಚಿತವಾಗಿ ಊಟ ಪೂರೈಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿತ್ತು.
‘ಬಡವರಿಗೆ ಸರ್ಕಾರ ಹಲವು ಯೋಜನೆಗಳ ಮೂಲಕ ಹಣ, ಧಾನ್ಯ ನೀಡುತ್ತಿರುವುದರಿಂದ ಶನಿವಾರದಿಂದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಈ ಹಿಂದಿನ ವ್ಯವಸ್ಥೆಯೇ ಅಂದರೆ ಸಬ್ಸಿಡಿ ದರದಲ್ಲಿ ಊಟ ನೀಡುವ ನಿಯಮ ಜಾರಿಗೆ ಬರಲಿದೆ’ ಎಂದು ಸರ್ಕಾರ ತಿಳಿಸಿದೆ.
‘ಸುಮಾರು 15 ಲಕ್ಷ ಕಟ್ಟಡ/ಕೂಲಿ ಕಾರ್ಮಿಕರಿಗೆ ₹ 2 ಸಾವಿರ ಮೊತ್ತದ ನಗದು ಹಾಗೂ ಅಹಾರ ಮತ್ತು ನಾಗರಿಕ ಸರಬರಾಜು ಇಲಾಖಾ ವತಿಯಿಂದ ಪ್ರತಿ ಕೂಲಿ ಕಾರ್ಮಿಕರು/ಬಡ ಕುಟುಂಬಗಳಿಗೆ 2 ತಿಂಗಳಿಗೆ ಸಾಕಾಗುವಷ್ಟು ಅಹಾರ ಪದಾರ್ಥ ಪೂರೈಕೆ ಮಾಡಲಾಗುತ್ತಿದೆ. ಹೀಗಾಗಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಈ ಹಿಂದಿನ ದರದಲ್ಲಿ ಆಹಾರ ಪೂರೈಸುವ ವ್ಯವಸ್ಥೆ ಮಾಡಲಾಗುತ್ತಿದೆ, ಆಹಾರದ ದುರ್ಬಳಕೆ ಆಗುವುದನ್ನು ತಪ್ಪಿಸುವ ಉದ್ದೇಶವೂ ಇದರ ಹಿಂದೆ ಇದೆ’ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


