ರಾಜ್ಯ

ಇಂದಿರಾ ಕ್ಯಾಂಟೀನ್‌ ಆಹಾರ ಸ್ಥಗಿತ: ಸಿದ್ದರಾಮಯ್ಯ ಜತೆ ದೂರವಾಣಿ ಸಂಭಾಷಣೆ ನಡೆಸಿದ ಸಿಎಂ ಬಿಎಸ್ ವೈ

ಇಂದಿರಾ ಕ್ಯಾಂಟೀನ್ ನಲ್ಲಿ ನೀಡುತ್ತಿದ್ದ ತಿಂಡಿ, ಊಟ ನಿಲ್ಲಿಸಿರುವ ವಿಷಯದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಇಂದು ಮಾತುಕತೆ ನಡೆಸಿದರು.

ಇಂದಿರಾ ಕ್ಯಾಂಟೀನ್‌ ಆಹಾರ ಸ್ಥಗಿತ: ಸಿದ್ದರಾಮಯ್ಯ ಜತೆ ದೂರವಾಣಿ ಸಂಭಾಷಣೆ ನಡೆಸಿದ ಸಿಎಂ ಬಿಎಸ್ ವೈ
Published On :

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ನೀಡುತ್ತಿದ್ದ ತಿಂಡಿ, ಊಟ ನಿಲ್ಲಿಸಿರುವ ವಿಷಯದ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಮೂಲಕ ಇಂದು ಮಾತುಕತೆ ನಡೆಸಿದರು.

ಊಟ, ತಿಂಡಿ ನಿಲ್ಲಿಸಿರುವ ಕುರಿತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ದೂರವಾಣಿ ಕರೆ ಮಾಡಿ, ಊಟ, ತಿಂಡಿ ಉಚಿತವಾಗಿ ನೀಡಲಾಗುತ್ತಿತ್ತು. ಆದರೆ ದುರುಪಯೋಗವಾದ ಕಾರಣ ದರ ನಿಗದಿ ಮಾಡಿರುವುದಾಗಿ ತಿಳಿಸಿದರು. 

ದುರುಪಯೋಗವಾಗದಂತೆ ಊಟ, ತಿಂಡಿಯನ್ನು ಇಂದಿರಾ ಕ್ಯಾಂಟೀನ್ ಮೂಲಕ ಬಡವರಿಗೆ ಉಚಿತವಾಗಿ ನೀಡಿ. ದುರುಪಯೋಗಕ್ಕೆ ಅವಕಾಶ ಮಾಡಿಕೊಡುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಎಂದು ಸಿದ್ದರಾಮಯ್ಯ ಅವರು ಹೇಳಿದರು. 

ಈ ಕುರಿತು ಪರಿಶೀಲನೆ ನಡೆಸುವುದಾಗಿ ಯಡಿಯೂರಪ್ಪ ಅವರು ಮಾತುಕತೆ ವೇಳೆ ಸಿದ್ದರಾಮಯ್ಯ ಅವರಿಗೆ ತಿಳಿಸಿದರು. 

ಲಾಕ್ ಡೌನ್ ನಿಂದ ರೈತರು, ಕೃಷಿ ಕೂಲಿ ಕಾರ್ಮಿಕರು, ಜತೆಗೆ ಹಲವಾರು ಕ್ಷೇತ್ರಗಳ ದುಡಿಯುವ ವರ್ಗದವರಿಗೆ ತೊಂದರೆಯಾಗಿದೆ. ಅವರ ನೆರವಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಇದೇ ವೇಳೆ ಸಿದ್ದರಾಮಯ್ಯ ಒತ್ತಾಯಿಸಿದರು. 

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು, ಪ್ರತಿಪಕ್ಷಗಳ ಸಲಹೆ, ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.