ಕೊರೋನಾ ಹೋರಾಟಕ್ಕಾಗಿ ಸಂಸದರ ವೇತನ ಶೇ.30ರಷ್ಟು ಕಡಿತ: ಪಕ್ಷಭೇದ ಮರೆತು ಕೇಂದ್ರ ನಿರ್ಧಾರಕ್ಕೆ ರಾಜ್ಯ ಸಂಸದರ ಒಪ್ಪಿಗೆ
ವಿಶ್ವದಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಂಪನ್ಮೂಲ ಸಂಗ್ರಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಸೇರಿದಂತೆ ಎಲ್ಲಾ ಕೇಂದ್ರ ಸಚಿವರ ಹಾಗೂ 750 ಸಂಸದರ ವೇತನದಲ್ಲಿ ಶೇ.30ರಷ್ಟು ಕಡಿಗೊಳಿಸಲು ನಿರ್ಧಾರ ಕೈಗೊಂಡಿದ್ದು, ಈ ನಿರ್ಧಾರಕ್ಕೆ ಪಕ್ಷಭೇದ ಮರೆತ ರಾಜ್ಯದ ಸಂಸದರು ಒಪ್ಪಿಗೆ ನೀಡಿದ್ದಾರೆ.

ನವದೆಹಲಿ: ವಿಶ್ವದಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಂಪನ್ಮೂಲ ಸಂಗ್ರಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಸೇರಿದಂತೆ ಎಲ್ಲಾ ಕೇಂದ್ರ ಸಚಿವರ ಹಾಗೂ 750 ಸಂಸದರ ವೇತನದಲ್ಲಿ ಶೇ.30ರಷ್ಟು ಕಡಿಗೊಳಿಸಲು ನಿರ್ಧಾರ ಕೈಗೊಂಡಿದ್ದು, ಈ ನಿರ್ಧಾರಕ್ಕೆ ಪಕ್ಷಭೇದ ಮರೆತ ರಾಜ್ಯದ ಸಂಸದರು ಒಪ್ಪಿಗೆ ನೀಡಿದ್ದಾರೆ.
ಕೇವಲ ಸಂಸದರಷ್ಟೇ ಅಲ್ಲದೆ, ರಾಷ್ಟ್ರಪತಿ, ಉಪರಾಷ್ಟ್ರಪತಿ ಹಾಗೂ ಎಲ್ಲಾ ರಾಜ್ಯಗಳ ರಾಜ್ಯಪಾಲರೂ ಸಾಮಾಜಿಕ ಜವಾಬ್ದಾರಿಯಂತೆ ವೇತನ ಕಡಿತಕ್ಕೆ ಸ್ವಯಂ ನಿರ್ಧಾರ ಕೈಗೊಂಡಿದ್ದಾರೆಂದು ಹೇಳಲಾಗತ್ತಿದೆ. ನಿನ್ನೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ನಿರ್ಧಾರವನ್ನು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸ್ವಾಗತಿಸಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದೆ ಸುಮಲತಾ ಅವರು, ಸಂಸದರ ಶೇ.30ರಷ್ಟು ವೇತನ ಕಡಿತ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಕಂಪನಿಗಲು, ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಎಲ್ಲಾ ಸಾಮಾನ್ಯ ವ್ಯಕ್ತಿಗಳೂ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಎಂಪಿಎಲ್ಎಡಿ ಇಂದ ಹೋಗುತ್ತಿದೆಯೋ ಅಥವಾ ಯಾವುದೇ ಮಾಧ್ಯಮದಿಂದ ಹೋದರೂ ಸರಿಯೇ, ನಮ್ಮ ಕ್ಷೇತ್ರದ ಜನರ ಸಂಕಷ್ಟಕ್ಕೆ ಸಹಾಯಕವಾದರೆ ಸಾಕು. ವೈದ್ಯಕೀಯ ವ್ಯವಸ್ಥೆಗಳಿಗೆ ಆ ಹಣ ಬಳಕೆಯಾಗಲಿದೆ. ಪ್ರಕ್ರಿಯೆ ಎಷ್ಟರ ಮಟ್ಟಿಗೆ ಪಾರದರ್ಶಕವಾಗಿರುತ್ತದೆ ಎಂಬುದರ ಸ್ಪಷ್ಟನೆ ನನಗೆ ಬೇಕಿದೆ ಎಂದು ಹೇಳಿದ್ದಾರೆ.
ಪ್ರತಾಪ್ ಸಿಂಹ ಮಾತನಾಡಿ, ಎಂಪಿಎಲ್ಎಡಿ ನಿಧಿಗೆ ಹೋಗುವ ರೂ.8000 ಕೋಟಿ ಪರವಾಗಿ ಹಾಗೂ ನಮ್ಮ ವೇತನದಿಂದ ಹೋಗುವ ಶೇ.30ರಷ್ಟು ಹಣದ ನಾವು ನಿಲ್ಲುತ್ತೇವೆ. ಈ ಹಣ ವೈದ್ಯಕೀಯ ವಲಯವನ್ನು ಬಲಪಡಿಸಿದ್ದೇ ಆದರೆ, ವೈರಸ್ ಕುರಿತು ಆಟವೇ ಬದಲಾಗಲಿದೆ. ಜಿಲ್ಲಾ ಆಸ್ಪತ್ರೆಗಳನ್ನು ಬಲಪಡಿಸಲು ಈ ಹಣವನ್ನು ಉಪಯೋಗಿಸಬೇಕೆಂಬುದು ನನ್ನ ಅಭಿಪ್ರಾಯವಾಗಿದೆ. ವೈರಾಲಜಿ ಲ್ಯಾಕ್ ಪ್ರಯೋಗಾಲಯಗಳು ಹಾಗೂ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಮೂಲಭೂತ ಸೌಲಭ್ಯ ಹೆಚ್ಚಿಸಲು ಬಳಕೆ ಮಾಡಬೇಕೆಂದು ಹೇಳಿದ್ದಾರೆ.
ಶೋಭಾ ಕರಂದ್ಲಾಜೆ ಮಾತನಾಡಿ, ಕೇಂದ್ರದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಅಭಿವೃದ್ಧಿ ಹಿಂದಕ್ಕೆ ಹೋದರೂ ಸರಿ, ಜನರ ಪ್ರಾಣ ರಕ್ಷಣೆ ನಮ್ಮ ಪ್ರಮುಖ ಆದ್ಯತೆ ಎಂದಿದ್ದಾರೆ.
ಕಾಂಗ್ರೆಸ್ ರಾಜ್ಯಸಭಾ ಸಂಸದ ರಾಜೀವ್ ಗೌಡ ಮಾತನಾಡಿ, ತ್ಯಾಗದ ಅಗತ್ಯವಿದೆ. ನಮ್ಮ ವೇತನ ನೀಡಿಸ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ನಿಧಿಗೆ ಹೋಗುವ ಸಂಸದರ ಹಣ ಜನರಿಗೆ ಸೇರಿದ್ದಾಗಿದೆ. ಇಂತ ನಿರ್ಧಾರಗಳು ಅಭಿವೃದ್ಧಿ ಕಾರ್ಯಗಳಿಗೆ ಸಹಾಯಕವಾಗಲಿದೆ. ಕಾರ್ಯಗಳಿಗೆ ಕೇಂದ್ರ ಸರ್ಕಾರದ ಹಣ ಬಿಡುಗಡೆಗಾಗಿ ಕಾಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


