ಬೇಕರಿ ತೆರೆಯಲು ಅವಕಾಶ: ಪಾರ್ಸೆಲ್ ಕೊಡಲು ಮಾತ್ರ ಅನುಮತಿ
ಕೊರೋನಾ ವೈರಸ್ ಭೀತಿಯಿಂದಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ರಾಜ್ಯದಲ್ಲಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದ ಮಕ್ಕಳು, ವೃದ್ಧರು, ರೋಗಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಬೇಕರಿ ಉತ್ಪನ್ನಗಳನ್ನು ತಯಾರಿಸಲು ಹಾಗೂ ಮಾರಾಟ ಮಾಡಲು ಅನುಮತಿ ಕೊಡಲಾಗಿದೆ.

ಬೆಂಗಳೂರು: ಕೊರೋನಾ ವೈರಸ್ ಭೀತಿಯಿಂದಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ರಾಜ್ಯದಲ್ಲಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದ ಮಕ್ಕಳು, ವೃದ್ಧರು, ರೋಗಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಬೇಕರಿ ಉತ್ಪನ್ನಗಳನ್ನು ತಯಾರಿಸಲು ಹಾಗೂ ಮಾರಾಟ ಮಾಡಲು ಅನುಮತಿ ಕೊಡಲಾಗಿದೆ.
ಬೇಕರಿ, ಬಿಸ್ಕೆಟ್ಟು, ಕ್ಯಾಂಡಿಮೆಂಟ್ಸ್, ಮಿಠಾಯಿ ಹಾಗೂ ಸಿಹಿತಿಂಡಿಗಳನ್ನು ತಯಾರಿಸಿ ಮಾರಾಟ ಮಾಡಲು ಅನುಮತಿ ಕೊಡಲಾಗಿದೆ ಎಂದು ಅಗತ್ಯ ವಸ್ತುಗಳ ಮತ್ತು ಪೂರೈಕೆ ಸರಪಳಿ ನಿರ್ವಹಣೆಯ ರಾಜ್ಯ ನೋಡೆಲ್ ಅಧಿಕಾರಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಕೇಂದ್ರ ಸರ್ಕಾರದ ಸೂಚನೆಯಂತೆ ಆದೇಶ ಹೊರಡಿಸಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಳಿಸಿದ್ದಾರೆ. ಅಗತ್ಯ ವಸ್ತುಗಳ ನಿರ್ವಹಣೆಯಡಿ ಬೇಕರಿ ಹಾಗೂ ಚಿಲ್ಲರೆ ಅಂಗಡಿಗಳು ತೆರೆಯಲಿವೆ.
ಆದರೆ ಸಂಪೂರ್ಣ ಮುಂಜಾಗ್ರತೆಯೊಂದಿಗೆ ಬೇಕರಿ ಉತ್ಪನ್ನಗಳನ್ನು ತಯಾರಿಸಬೇಕೆಂದು ಆದೇಶ ಮಾಡಲಾಗಿದೆ. ಸಿಹಿ ತಿಂಡಿ, ಬಿಸ್ಕೆಟ್ಟು ತಯಾರಿಸಲು ಅತ್ಯಂಕ ಕಡಿಮೆ ಸಿಬ್ಬಂದಿ ಬಳಸಿಕೊಳ್ಳಬೇಕು, ಆರೋಗ್ಯವಂತರು ಉತ್ಪನ್ನಗಳ ತಯಾರಿಕೆ ಮಾಡಬೇಕು, ಅತ್ಯಂತ ಹೆಚ್ಚಿನ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಉತ್ಪಾದನೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಜೊತೆಗೆ ಯಾವುದೇ ಕಾರಣಕ್ಕೂ ಬೇಕರಿ ಎದುರು ಅಥವಾ ಬೇಕರಿಯಲ್ಲಿ ತಿನ್ನಲು ಅಥವಾ ಸರಬರಾಜು ಮಾಡಲು ಅವಕಾಶವಿಲ್ಲ. ಬೇಕರಿಯಿಂದ ಪಾರ್ಸೆಲ್ ಕೊಡಲು ಮಾತ್ರ ಅನುಮತಿಯಿದೆ ಎಂದು ತಿಳಿಸಲಾಗಿದೆ.
ಇದೀಗ ಕೇಂದ್ರ ಸರ್ಕಾರ ಕೊಟ್ಟಿರುವ ರಿಯಾಯತಿಯಿಂದ ಏಪ್ರಿಲ್ 14ಕ್ಕೆ ಲಾಕ್‌ಡೌನ್ ಕೊನೆಯಾಗುತ್ತದೆಯಾ ಎಂಬ ಭಾವನೆಗಳು ಬಂದಿವೆ. ಬೇಕರಿ ತೆರೆಯಲು ಅವಕಾಶ ಕೊಟ್ಟಿರುವಂತೆ ಇನ್ನೂ ಹಲವು ಸೇವೆಗಳಿಗೆ ಲಾಕ್‌ಡೌನ್ ಅವಧಿಯ ಬಳಿಕ ಕೊಡುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


