ಲಾಕ್‌ಡೌನ್ ಮುಂದುವರಿದರೆ ಸರ್ಕಾರಿ ನೌಕರರ ಸಂಬಳ ಕಡಿತ: ಸಿಎಂ ಬಿಎಸ್ ಯಡಿಯೂರಪ್ಪ
ಕೊರೋನಾ ವೈರಸ್ ನಿಂದಾಗಿ ಪರಿಸ್ಥಿತಿ ಹೀಗೆ ಮುಂದುವರೆದು, ಲಾಕ್ ಡೌನ್ ಮುಂದುವರೆದರೆ ಆರ್ಥಿಕ ಪರಿಸ್ಥಿತಿ ನಿಯಂತ್ರಣಕ್ಕಾಗಿ ಸರ್ಕಾರಿ ನೌಕರರ ಸಂಬಳ ಕಡಿತ ಅನಿವಾರ್ಯವಾಗಬಹುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ಕೊರೋನಾ ವೈರಸ್ ನಿಂದಾಗಿ ಪರಿಸ್ಥಿತಿ ಹೀಗೆ ಮುಂದುವರೆದು, ಲಾಕ್ ಡೌನ್ ಮುಂದುವರೆದರೆ ಆರ್ಥಿಕ ಪರಿಸ್ಥಿತಿ ನಿಯಂತ್ರಣಕ್ಕಾಗಿ ಸರ್ಕಾರಿ ನೌಕರರ ಸಂಬಳ ಕಡಿತ ಅನಿವಾರ್ಯವಾಗಬಹುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕು ತಡೆಗಾಗಿ ಇದೀಗ ಜಾರಿಯಲ್ಲಿರುವ ಲಾಕ್‌ಡೌನ್ ಏಪ್ರಿಲ್ 14ರ ನಂತರವೂ ಮುಂದುವರಿದರೆ ಮುಂದಿನ ತಿಂಗಳು ಸರ್ಕಾರಿ ನೌಕರರ ಸಂಬಳದಲ್ಲಿ ಕಡಿತ ಮಾಡಬೇಕಾಗಿ ಬರಬಹುದು. ಲಾಕ್ ಡೌನ್‌ನಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ನೌಕರರ ಹಿತ ಕಾಪಾಡುವ ಸಲುವಾಗಿ ಏಪ್ರಿಲ್ ತಿಂಗಳಲ್ಲಿ ಯಾರಿಗೂ ಸಂಬಳ ಕಡಿತ ಮಾಡುವುದಿಲ್ಲ. ಲಾಕ್ ಡೌನ್ ಇದೇ 14ಕ್ಕೆ ಕೊನೆಗೊಂಡರೆ ಆರ್ಥಿಕ ಚಟುವಟಿಕೆ ಸಹಜ ಸ್ಥಿತಿಗೆ ಮರಳಿ ಸಂಬಳ ಕೊಡುವುದಕ್ಕೆ ಯಾವ ತೊಂದರೆಯೂ ಆಗಲಾರದು, ಆದರೆ ಲಾಕ್‌ಡೌನ್ ಮುಂದುವರಿದರೆ ಮಾತ್ರ ಮುಂದಿನ ತಿಂಗಳ ಸಂಬಳದಲ್ಲಿ ಎಷ್ಟು ಕಡಿತ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸುವ ಅಗತ್ಯ ಬೀಳಬಹುದು ಎಂದು ಹೇಳಿದರು.
ನಮ್ಮ ರಾಜ್ಯವಷ್ಟೇ ಅಲ್ಲ, ಇತರ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರದ ಹಣಕಾಸು ಸ್ಥಿತಿಯೂ ಉತ್ತಮವಾಗಿಲ್ಲ. ನಮ್ಮ ವರಮಾನ ಕುಸಿದಿರುವುದರಿಂದ ಎಲ್ಲ ಅಭಿವೃದ್ಧಿ ಚಟುವಟಿಕೆಗಳೂ ಸ್ಥಗಿತಗೊಂಡಿವೆ. ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳಲ್ಲಿ 14ರ ನಂತರ ಲಾಕ್‌ಡೌನ್ ಸಡಿಲಿಕೆ ಸಾಧ್ಯವಾಗಬಹುದು. ಆದರೆ ಲಾಕ್‌ಡೌನ್‌ನ ಯಶಸ್ಸು ಜನರ ಕೈಯಲ್ಲೇ ಇದೆ. ಅವರು ಸಹಕಾರ ನೀಡಿ ಲಾಕ್ ಡೌನ್ ಮುಗಿಯುವವರೆಗೂ ಮನೆಗಳಲ್ಲೇ ಇದ್ದರೆ ವೈರಸ್ ಸೋಂಕು ನಿಯಂತ್ರಣಕ್ಕೆ ನೆರವಾಗಬೇಕು. ರಾಜ್ಯದಲ್ಲಿ ಯಾವುದೇ ರೀತಿಯ ಅಗತ್ಯ ವಸ್ತುಗಳ ಕೊರೆತೆ ಇಲ್ಲ ಎಂದು ಹೇಳಿದರು.
ಅಂತೆಯೇ ರೈತರು ತಾವು ಬೆಳೆದೆ ಬೆಳೆಗಳನ್ನು ಇತರೆ ಜಿಲ್ಲೆಗಳಲ್ಲಿ ತಂದು ಮಾರುವುದಕ್ಕೆ ಅವಕಾಶ ನೀಡಲಾಗಿದೆ. ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ರೈತರು ಈ ಸಂಬಂಧ ಸಮಸ್ಯೆ ಎದುರಿಸಿದರೆ ಕರೆ ಮಾಡಬಹುದು ಎಂದು ಸಿಎಂ ಬಿಎಸ್ ವೈ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


