ಕೊರೋನಾ ಹಬ್ಬಿಸುವ ಮತಾಂಧರಿಗೆ ಕಾನೂನು ಕ್ರಮದ ಎಚ್ಚರಿಕೆ ಕೊಡಿ, ಸಹಕರಿಸದಿದ್ದರೆ ಗುಂಡಿಕ್ಕಿ: ಸರ್ಕಾರಕ್ಕೆ ಯತ್ನಾಳ್ ಸವಾಲ್!
ಕೊರೋನಾ ವೈರಸ್ ಹರಡುವಿಕೆ ವಿಷಯದಲ್ಲಿ ಮುಸ್ಲಿಮರ ವಿರುದ್ಧ ವಿನಾಕಾರಣ ಆರೋಪ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಯಡಿಯೂರಪ್ಪ ಎಚ್ಚರಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಬೆಂಗಳೂರು: ಕೊರೋನಾ ವೈರಸ್ ಹರಡುವಿಕೆ ವಿಷಯದಲ್ಲಿ ಮುಸ್ಲಿಮರ ವಿರುದ್ಧ ವಿನಾಕಾರಣ ಆರೋಪ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬ ಯಡಿಯೂರಪ್ಪ ಎಚ್ಚರಿಕೆಗೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದಿದ್ದು, ಎಚ್ಚರಿಕೆ ನೀಡುವುದಿದ್ದರೆ ಕೊರೋನಾ ಹರಡುತ್ತಿರುವ ತಬ್ಲಿಘಿ ಮತಾಂಧರಿಗೆ, ಅವರನ್ನು ಸಮರ್ಥಿಸುತ್ತಿರುವ ಧಾರ್ಮಿಕ, ರಾಜಕೀಯ ನಾಯಕರಿಗೆ ಎಚ್ಚರಿಕೆ ನೀಡಬೇಕೆ ಹೊರತು ದೇಶಭಕ್ತ ಸಮುದಾಯಗಳಿಗೆ ಅಲ್ಲ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ತಬ್ಲಿಘಿ ಜಮಾತ್ ನ ಜಿಹಾದಿಗಳಿಗೆ ಅಂತಿಮ ಎಚ್ಚರಿಕೆ ಕೊಡಿ, ಸಹಕರಿಸದಿದ್ದರೆ ಗುಂಡಿಕ್ಕಿ, ಇದು ಪ್ರಚೋದನೆ ಎನಿಸಿದರೆ ನನ್ನ ಮೇಲೆ ಕ್ರಮ ಕೈಗೊಳ್ಳಿ ಎಂದು ಯತ್ನಾಳ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರ ಈ ಪೋಸ್ಟ್ ಈಗ ವೈರಲ್ ಆಗತೊಡಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


