ತಬ್ಲಿಘಿ ಜಮಾತ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಕ್ರಿಮಿನಲ್ ಕೇಸ್: ಪಿಎಫ್ಐ ವಿರುದ್ದ ಕಿಡಿಕಾರಿದ ಶೋಭಾ ಕರಂದ್ಲಾಜೆ
ದೆಹಲಿಯಲ್ಲಿ ನಡೆದ ತಬ್ಲೀಗ್ ಜಮಾತ್ ಸಭೆಯಲ್ಲಿ ಪಾಲ್ಗೊಂಡವರ ಕುರಿತು ಹೇಳಿಕೆ ನೀಡಿದ್ದಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಹೇಳಿದ್ದ ಪಿಎಫ್ಐ ವಿರುದ್ದ ಸಂಸದೆ ಶೋಭಾ ಕರಂದ್ಲಾಜೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಬೆಂಗಳೂರು: ದೆಹಲಿಯಲ್ಲಿ ನಡೆದ ತಬ್ಲೀಗ್ ಜಮಾತ್ ಸಭೆಯಲ್ಲಿ ಪಾಲ್ಗೊಂಡವರ ಕುರಿತು ಹೇಳಿಕೆ ನೀಡಿದ್ದಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಹೇಳಿದ್ದ ಪಿಎಫ್ಐ ವಿರುದ್ದ ಸಂಸದೆ ಶೋಭಾ ಕರಂದ್ಲಾಜೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದವರು ವೈದ್ಯಕೀಯ ಪರೀಕ್ಷೆಗೊಳಪಡದಿದ್ದಕ್ಕೆ ಕಾರ್ಯಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು. ನಿಜಾಮುದ್ದೀನ್ ಮರ್ಕಜ್ ನಲ್ಲಿ ಬೆಳಗಾವಿಯ 70 ಜನರು ಭಾಗಿಯಾಗಿದ್ದರು. ಇದರಲ್ಲಿ 8 ಮಂದಿಯಲ್ಲಿ ಈಗಾಗಲೇ ವೈರಸ್ ದೃಢಪಟ್ಟಿದೆ. ಇನ್ನುಳಿದವರ ವೈದ್ಯಕೀಯ ವರದಿ ಬರಬೇಕಿದೆ. ಕ್ವಾರಂಟೈನ್ ನಲ್ಲಿರುವ ತಬ್ಲಿಘಿಗಳು ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ವೈದ್ಯಕೀಯ ಸಿಬ್ಬಂದಿಗಳ ಮುಂದೆ ನೃತ್ಯ ಮಾಡುವುದು, ಉಗಿಯುವುದು ಮಾಡುತ್ತಿದ್ದಾರೆ. ಇದರ ಉದ್ದೇಶವೇನು? ಎಂದು ಪ್ರಶ್ನಿಸಿದ್ದಾರೆ.
ಈ ಹಿಂದೆ ಕೂಡ ಪಿಎಫ್ಐ ನನ್ನ ವಿರುದ್ಧ ಸಾಕಷ್ಟು ಪ್ರಕರಣಗಳನ್ನು ದಾಖಲು ಮಾಡಿದೆ. ಪ್ರಕರಣ ಎದುರಿಸಲು ನಾನು ಸಿದ್ಧಳಿದ್ದೇನೆ. ಆದರೆ, ತಬ್ಲಿಘಿ ಜಮಾತ್ ಗಳಿಗೂ ಪಿಎಫ್ಐಗೂ ಏನು ಸಂಬಂಧವಿದೆ ಎಂಬುದನ್ನು ಅವರು ವಿವರಿಸಲಿ. ಒಂದೇ ನಾಣ್ಯದಲ್ಲಿ ಎರಡು ಮುಖಗಳಿದ್ದಂತೆ ಪಿಎಫ್ಐಗೂ ಇದೆಯೇ? ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡವರೇಕೆ ಮುಂದೆ ಬಂದು ಪರೀಕ್ಷೆಗೊಳಪಡುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


