ರಾಯಬಾಗ: ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ್ದವರ ಬಂಧನ

ರಾಯಬಾಗ; ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಸರ್ವೆ ಕಾರ್ಯ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಕುಡಚಿ ಪೊಲೀಸರು ಬಂಧಿಸಿದ್ದಾರೆ.
ಕುಡಚಿ ಪಟ್ಟಣದಲ್ಲಿ ನಾಲ್ಕು ಜನರಿಗೆ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿರುವ ಹಿನ್ನೆಲೆ ಮೂರು ಜನ ಆಶಾ ಕಾರ್ಯಕರ್ತೆಯರು ಮಂಗಳವಾರ ಮನೆಮನೆ ಸರ್ವೆ ಕಾರ್ಯ ನಡೆಸುತ್ತಿದ್ದರು. ಆ ಸಂದರ್ಭದಲ್ಲಿ ಕಾರ್ಯಕರ್ತರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿ ಅವರ ಕೈಯಲ್ಲಿದ್ದ ದಾಖಲೆಗಳನ್ನು ಹರಿದು ಹಾಕಿದ್ದರ ಹಿನ್ನೆಲೆಯಲ್ಲಿ ಈ ಕುರಿತು ಆಶಾ
ಕಾರ್ಯಕರ್ತೆಯರು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಐಪಿಸಿ ೧೪೩, ೧೪೭, ೩೨೩, ೩೫೩, ೩೫೪(ಬಿ), ೧೮೮, ೧೦೯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿ ಪೊಲೀಸರು ತನಿಖೆ ಕೈಗೊಂಡು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಡಚಿ ಪಟ್ಟಣದ ಅಬ್ದುಲ್ಖಾದರ್ ರೋಹಿಲೆ(೪೧), ಅತ್ತಾವುಲ್ಲ್ ಕಮಲಖಾನ್ (೨೬), ಆಸೀಫ್ ಪಾಶ್ವಾಪೂರೆ(೩೨), ಶಿರಾಜುದ್ದೀನ ಬಸ್ತಿ(೫೦), ಮುಜಮ್ಮಿಲ್ ಬಸ್ತಿ(೨೫) ಪೊಲೀಸರ
ವಶದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


