ಅಕಾಲಿಕ ಮಳೆಯಿಂದ ನಷ್ಟವಾದ ಜಮೀನುಗಳಿಗೆ ಭೇಟಿ: ರೈತರಿಗೆ ಆತ್ಮಸ್ಥೈರ್ಯ ತುಂಬಿದ ಬಿಸಿ ಪಾಟೀಲ್
ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾಗಿದ್ದನ್ನು ಗಮನಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಕೊಪ್ಪಳ: ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾಗಿದ್ದನ್ನು ಗಮನಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಇಲ್ಲಿನ ಗಂಗಾವತಿ ತಾಲೂಕಿನ ಬಾಬುರೆಡ್ಡಿ ಕ್ಯಾಂಪ್, ಹಣವಾಳ, ಸಿಂಗನಾಳ, ಸಿಂಗನಾಳ ಕ್ಯಾಂಪ್, ಜಿರಾಳ ಕಲ್ಲಗುಡಿ ರೈತರ ಹೊಲಗೀಗೆ ಭೇಟಿ ನೀಡಿ ಬೆಳೆಯನ್ನು ಪರಿಶೀಲಿಸಿದ ಸಚಿವರು ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.
ಬೆಳೆ ನಷ್ಟದ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿ, ಆದಷ್ಟು ಬೇಗ ಬೆಳೆ ನಷ್ಟ ಸಮೀಕ್ಷೆ ಮಾಡಬೇಕು. ಬೆಳೆ ನಷ್ಟದಿಂದ ಯಾವುದೇ ರೈತರು ಆತಂಕಕ್ಕೊಳಗಾಗುವುದು ಬೇಡ. ಪ್ರಕೃತಿ ವಿಕೋಪಗಳಾದಾಗ ಧೈರ್ಯದಿಂದ ಇರಬೇಕು. ಸರ್ಕಾರ ರೈತರ ಜೊತೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ದಡೆಸೂಗೂರು ಬಸವರಾಜ್, ಪರಣ್ಣ ಮುನವಳ್ಳಿ,ಜಿಪಂ ಅಧ್ಯಕ್ಷ ವಿಶ್ವನಾಥ ರೆಡ್ಡಿ ಸೇರಿದಂತೆ ಕೃಷಿ ತೋಟಗಾರಿಕಾ ಅಧಿಕಾರಿಗಳು ಜೊತೆಗಿದ್ದರು.
ಇದಕ್ಕೂ ಮುನ್ನ ದಾರಿ ಮಧ್ಯದಲ್ಲಿ ಕೆಲವು ರೈತರನ್ನು ಭೇಟಿಯಾದರು. ಕೊಪ್ಪಳ ಜಿಲ್ಲೆಯ ಮೆಟ್ರಿ ಗ್ರಾಮದಲ್ಲಿ ರೈತರನ್ನುದ್ದೇಶಿಸಿ ಮಾತನಾಡಿ, ಯಾವುದೇ ಆತಂಕವಿಲ್ಲದೇ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ ಎಂದು ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


