ಲಾಕ್ ಡೌನ್ ನಡುವೆಯೂ 24 ವರ್ಷಗಳ ನಂತರ ಹುತಾತ್ಮ ಯೋಧನ ಕುಟುಂಬಕ್ಕೆ ನಿವೇಶನ ಹಂಚಿಕೆ
ನಾಗಲ್ಯಾಂಡ್‌ನಲ್ಲಿ 24 ವರ್ಷಗಳ ಹಿಂದೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ರಾಜ್ಯದ ಸೈನಿಕ ಎ.ಮುನಿಯಪ್ಪನ್ ಅವರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಉಚಿತವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ.

ಬೆಂಗಳೂರು: ನಾಗಲ್ಯಾಂಡ್‌ನಲ್ಲಿ 24 ವರ್ಷಗಳ ಹಿಂದೆ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ರಾಜ್ಯದ ಸೈನಿಕ ಎ.ಮುನಿಯಪ್ಪನ್ ಅವರ ಕುಟುಂಬಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಉಚಿತವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ.
ಸೈನಿಕ ಕಲ್ಯಾಣ ಇಲಾಖೆಯ ಶಿಫಾರಸಿನ ಮೇರೆಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 30*40 ಅಡಿ ಅಳತೆಯ ನಿವೇಶನ ಹಂಚಿಕೆ ಮಾಡಿ ಆದೇಶ ಹೊರಡಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹುತಾತ್ಮರ ಪತ್ನಿ ಎಂ.ದೇವಿ ಅವರಿಗೆ ಪತ್ರ ಬರೆದು ವಿಷಯ ತಿಳಿಸಿದ್ದಾರೆ. ಇದರೊಂದಿಗೆ ಆದೇಶ ಪ್ರತಿಯನ್ನು ಕೂಡ ಕಳುಹಿಸಿಕೊಟ್ಟಿದ್ದಾರೆ.
ನಿಮ್ಮ ಪತಿ ಸಿಪಾಯಿ ಎ.ಮುನಿಯಪ್ಪನ್ ಅವರು ನಾಗಾಲ್ಯಾಂಡ್‌ನಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯಲ್ಲಿ 24 ವರ್ಷಗಳ ಹಿಂದೆಯೇ ಮೃತಪಟ್ಟಿದ್ದು, ತಾವು ಕೂಡ ಈಗ ತೀವ್ರ ಅನಾರೋಗ್ಯ ಪೀಡಿತರಾಗಿರುವ ವಿಷಯ ತಿಳಿದು ಅತ್ಯಂತ ದುಃಖವಾಯಿತು. ಭಗವಂತ ನಿಮಗೆ ಆಯುರಾರೋಗ್ಯ ನೀಡಿ ರಕ್ಷಿಸಲಿ ಎಂದು ಪ್ರಾರ್ಥಿಸುತ್ತೇನೆ .ದೇಶ ಸೇವೆಗೆ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಮುನಿಯಪ್ಪನ್ ಅವರ ತ್ಯಾಗ ಸ್ಮರಣೀಯ. ತಾವು ನಿವೇಶನ ಹಂಚಿಕೆಯಾಗದೆ ತೊಂದರೆ ಅನುಭವಿಸುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಂದ ಮಾಹಿತಿ ತರಿಸಿ ಪರಿಶೀಲಿಸಿದಾಗ ತಮಗೆ ನಿವೇಶನ ಹಂಚಿಕೆಯಾಗಿರುವುದು ತಿಳಿದುಬಂದಿದೆ. ನಿವೇಶನ ಮಂಜೂರಾತಿ ಪತ್ರ ಇದರೊಂದಿಗೆ ಲಗತ್ತಿಸಿ ಕಳುಹಿಸಲಾಗಿದೆ. ತಮಗೆ, ತಮ್ಮ ಕುಟುಂಬದವರಿಗೆ ಮತ್ತೊಮ್ಮೆ ಶುಭ ಹಾರೈಕೆಗಳು ಎಂದು ಮುಖ್ಯಮಂತ್ರಿ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


