ರಾಯಚೂರು: ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಪಾಲು
ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ನಡೆದಿದೆ.

ರಾಯಚೂರು: ನೀರು ತರಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ನಡೆದಿದೆ.
ನಾಗರಾಜ್ (10), ಕಾರ್ತಿಕ್ (8) ಹಾಗೂ ರವಿಕುಮಾರ್ (7) ಮೃತ ಬಾಲಕರು. ಮೃತ ಬಾಲಕರು ಒಂದೇ ಕುಟುಂಬದವರಾಗಿದ್ದು, ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನೀರು ತರಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಈ ವೇಳೆ ಒಬ್ಬ ಬಾಲಕ ನೀರಿನಲ್ಲಿ ಮುಳುಗಿದ್ದಾನೆ. ಇದನ್ನು ನೋಡಿದ ಮತ್ತೊಬ್ಬ ಬಾಲಕ ಆತನನ್ನು ಕಾಪಾಡಲು ಹೋಗಿ ಆತನೂ ಕೆರೆಯಲ್ಲಿ ಮುಳುಗಿದ್ದು, ಇದೇ ರೀತಿ ಮೂವರು ಮಕ್ಕಳು ಒಬ್ಬರನ್ನು ಕಾಪಾಡಲು ಒಬ್ಬರು ಹೋಗಿ ಮೂವರು ನೀರು ಪಾಲಾಗಿದ್ದಾರೆ ಎನ್ನಲಾಗಿದೆ.
ಸ್ಥಳೀಯರು ಕೆರೆಯ ಬಳಿ ಹೋಗಿ ನೋಡಿದಾಗ ಬಾಲಕರು ಮೃತಪಟ್ಟಿರುವುದು ಬೆಳಕಿಗೆ ಬಂದಿದ್ದು, ತಕ್ಷಣ ಈ ಬಗ್ಗೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


