ಕೊವಿಡ್ -19: ರಾಜ್ಯದಲ್ಲಿ ಸಾರ್ವಜನಿಕವಾಗಿ ಮಾಸ್ಕ್ ಧರಿಸುವುದು ಕಡ್ಡಾಯ
ಸಾರ್ವಜನಿಕರು ಮನೆಯಿಂದ ಹೊರಬಂದಾಗಲೆಲ್ಲಾ ಮುಖಗವಸ(ಮಾಸ್ಕ್)ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಆರೋಗ್ಯ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದ್ದು,

ಬೆಂಗಳೂರು: ಸಾರ್ವಜನಿಕರು ಮನೆಯಿಂದ ಹೊರಬಂದಾಗಲೆಲ್ಲಾ ಮುಖಗವಸ(ಮಾಸ್ಕ್)ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಆರೋಗ್ಯ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದ್ದು, ಎಲ್ಲರೂ ಮಾಸ್ಕ್ ಗಳನ್ನು ಧರಿಸಬೇಕಾಗಿಲ್ಲ ಎಂದು ಈ ಹಿಂದೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ.
ಖರೀದಿ ಸಮಯದಲ್ಲಿ, ಕಚೇರಿ ಕೆಲಸಕ್ಕೆ ಹಾಜರಾದಾಗ ಮತ್ತು ಆಕಸ್ಮಿಕವಾಗಿ ಕೊವಿಡ್ -19 ಸೋಂಕಿತ ವ್ಯಕ್ತಿಯ ಪ್ರಥಮ ಇಲ್ಲವೇ ದ್ವಿಸಂಪರ್ಕಗಳೊಂದಿಗೆ ಸಂವಹನ ನಡೆಸಿದಾಗಲೆಲ್ಲಾ ಸಾರ್ವಜನಿಕರು ಮುಖಗವಸ ಧರಿಸಬೇಕೆಂದು ಸುತ್ತೋಲೆ ಹೇಳಿದೆ.
ಮಾಸ್ಕ್ ಗಳು ಒಂಬತ್ತು ಇಂಚು ಅಗಲ, ಏಳು ಇಂಚು ಉದ್ದವಿರಬೇಕು. ಮಕ್ಕಳಿಗೆ ಐದು ಇಂಚು ಗಾತ್ರವನ್ನು ಶಿಫಾರಸು ಮಾಡಲಾಗಿದೆ.
ಕೈಯಿಂದ ಇಲ್ಲವೇ ಯಂತ್ರದಿಂದ ಹೊಲಿದಿರುವ ಮುಖಗವಸಗಳನ್ನು ಮರು ಬಳಸಬಹುದಾಗಿದೆ. ಆದರೂ, ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳಿಂದ ಸಾರ್ವಜನಿಕರು ತಮ್ಮನ್ನು ರಕ್ಷಿಸಿಕೊಳ್ಳಲು ವೈದ್ಯಕೀಯವಾಗಿ ಪ್ರಮಾಣೀಕರಿಸಿದ ಮುಖಗವಸಗಳನ್ನು ಮಾತ್ರ ಬಳಸಬೇಕಾಗುತ್ತದೆ ಎಂದು ಸುತ್ತೋಲೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


