ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿವೆ 6000 ಬೆಡ್, 600 ವೆಂಟಿಲೇಟರ್: ಕೊವೀಡ್-19 ಸಮಿತಿ
ಕೊರೋನಾ ಮಹಾಮಾರಿ ಮತ್ತಷ್ಟು ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಜೊತೆಗೆ ಖಾಸಗಿ ಆಸ್ಪತ್ರೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೋವಿಡ್ -19 ಸಮಿತಿ ಸರ್ವೇ ಮಾಡಿದ್ದು ಈ ಪ್ರಕಾರ ಬೆಂಗಳೂರಿನಲ್ಲಿರುವ ಖಾಸಗಿ ಆಸ್ಪತ್ರೆಗಳ ಪೈಕಿ 6000 ಬೆಡ್ ಮತ್ತು 600 ವೆಂಟಿಲೇಟರ್ ಗಳಿವೆ ಎಂದು ವರದಿ ನೀಡಿದೆ.

ಬೆಂಗಳೂರು: ಕೊರೋನಾ ಮಹಾಮಾರಿ ಮತ್ತಷ್ಟು ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಜೊತೆಗೆ ಖಾಸಗಿ ಆಸ್ಪತ್ರೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೋವಿಡ್ -19 ಸಮಿತಿ ಸರ್ವೇ ಮಾಡಿದ್ದು ಈ ಪ್ರಕಾರ ಬೆಂಗಳೂರಿನಲ್ಲಿರುವ ಖಾಸಗಿ ಆಸ್ಪತ್ರೆಗಳ ಪೈಕಿ 6000 ಬೆಡ್ ಮತ್ತು 600 ವೆಂಟಿಲೇಟರ್ ಗಳಿವೆ ಎಂದು ವರದಿ ನೀಡಿದೆ.
ಕೋವಿಡ್ -19 ಏಕಾಏಕಿ ರಾಜ್ಯದಲ್ಲಿ ಮತ್ತಷ್ಟು ವಿಸ್ತಾರವಾದರೆ ತೀವ್ರ ಸಂಕಷ್ಟ ಎದುರಾಗಲಿದೆ ಎಂಬ ಆತಂಕ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ನೇತೃತ್ವದ ಸರ್ಕಾರಿ ಸಮಿತಿಯು ಕರ್ನಾಟಕದ ವೈದ್ಯಕೀಯ ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ.
ಇವುಗಳನ್ನು ಸಣ್ಣ ಚಿಕಿತ್ಸಾಲಯಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಿರ್ಣಾಯಕ ಆರೈಕೆಯ ಅಗತ್ಯವಿಲ್ಲದ COVID-19 ರೋಗಿಗಳನ್ನು ಇರಿಸಲಾಗಿರುವ ಆಸ್ಪತ್ರೆಗಳು, ಐಸಿಯು ಮತ್ತು ವೆಂಟಿಲೇಟರ್ ಆರೈಕೆಯ ಅಗತ್ಯವಿರುವ COVID-19 ರೋಗಿಗಳನ್ನು ಹೊಂದಿರುವ ಆಸ್ಪತ್ರೆಗಳು, ಟೆಲಿಮೆಡಿಸಿನ್ ಸೌಲಭ್ಯಗಳು ಮತ್ತು COVID ಅಲ್ಲದ ಪ್ರವೇಶವನ್ನು ಪೂರೈಸುವ ಖಾಸಗಿ ಆಸ್ಪತ್ರೆಗಳು ಎಂದು ವೈದ್ಯಕೀಯ ಸಂಸ್ಥೆಗಳನ್ನು ಐದು ವಿಭಾಗಗಳಾಗಿ ವಿಂಗಡಿಸಲಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯ ಏರಿಕೆ ನಿಲ್ಲುವ ಲಕ್ಷಣಗಳು ಕಂಡುಬರುತ್ತಿಲ್ಲ. ಗುರುವಾರ ರಾತ್ರಿಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ಮೈಸೂರು ಒಂದರಲ್ಲೇ 5 ಹೊಸ ಪ್ರಕರಣಗಳು ಹಾಗೂ ರಾಜ್ಯಾದ್ಯಂತ 5 ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


