ಬೆಂಗಳೂರು: ಕ್ವಾರಂಟೈನ್‌ನಲ್ಲಿದ್ದ 300 ಮಂದಿ ತಬ್ಲೀಘಿಗಳ ಪೈಕಿ ಮೂವರಲ್ಲಿ ಸೋಂಕು, ಆತಂಕ ಸೃಷ್ಠಿ!
ದೆಹಲಿಯ ನಿಜಾಮುದ್ದೀನ್‌ನಿಂದ ನಗರಕ್ಕೆ ವಾಪಾಸ್ಸಾಗಿ ಹಜ್ ಭವನದ ಕ್ವಾರೆಂಟೈನ್‌ನಲ್ಲಿಡಲಾಗಿದ್ದ 300 ಮಂದಿ ತಬ್ಲೀಘಿಗಳ ಪೈಕಿ ಮೂವರಲ್ಲಿ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದೆ.

ಬೆಂಗಳೂರು: ದೆಹಲಿಯ ನಿಜಾಮುದ್ದೀನ್‌ನಿಂದ ನಗರಕ್ಕೆ ವಾಪಾಸ್ಸಾಗಿ ಹಜ್ ಭವನದ ಕ್ವಾರೆಂಟೈನ್‌ನಲ್ಲಿಡಲಾಗಿದ್ದ 300 ಮಂದಿ ತಬ್ಲೀಘಿಗಳ ಪೈಕಿ ಮೂವರಲ್ಲಿ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದೆ.
ನಗರದ ಹಜ್ ಭವನದಲ್ಲಿ ಕ್ವಾರೆಂಟೈನ್ ಮಾಡಲಾಗಿದ್ದ 300 ಮಂದಿ ತಬ್ಲೀಘಿಗಳಲ್ಲಿ ಹಲವರು ಕ್ವಾರೆಂಟೈನ್ ಮುಗಿಸಿದ್ದು ನೆಗೆಟಿವ್ ಬಂದಿದ್ದರಿಂದ ಅವರೆಲ್ಲರನ್ನು ಮನೆಗೆ ಕಳುಹಿಸಲಾಗಿದೆ. ಆದರೂ ಅವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ.
ಕ್ವಾರೆಂಟೈನ್ ನಲ್ಲಿದ್ದು ವೈದ್ಯಕೀಯ ವರದಿ ನೆಗೆಟಿವ್ ಬಂದು ಮನೆಗಳಿಗೆ ವಾಪಾಸ್ ತೆರಳಿರುವವರ ಮೇಲೆ ನಿಗಾ ಇಡಲಾಗಿದೆ. ಇವರು ಸೋಂಕು ದೃಢಪಟ್ಟಿರುವವರ ಪ್ರಾಥಮಿಕ ಸಂಪರ್ಕದಲ್ಲಿರುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮನೆಗೆ ವಾಪಾಸ್ ತೆರಳಿರುವವರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


