ನಿರಾಶ್ರಿತರ ಬಗ್ಗೆ ಸೂಕ್ತ ಪರಿಶೀಲನೆ ಮಾಡದ್ದಕ್ಕೆ ಬಿಬಿಎಂಪಿ ವಿರುದ್ಧ ಹೈಕೋರ್ಟ್ ಗರಂ
ಲಾಕ್'ಡೌನ್ ಪರಿಣಾಮ ನಗರದಲ್ಲಿ ವಾಸ್ತವವಾಗಿ ಎಷ್ಟು ವಲಸೆ ಕಾರ್ಮಿಕರು, ನಿರಾಶ್ರಿತರು ಹಾಗೂ ಕೂಲಿ ಕಾರ್ಮಿಕರು ಆಶ್ರಯ ಇಲ್ಲದೆ ರಸ್ತೆ ಹಾಗೂ ಸರ್ಕಾರಿ ಜಾಗಗಳಲ್ಲಿ ಉಳಿದುಕೊಂಡಿದ್ದಾರೆ ಎಂಬುದನ್ನು ಬಿಬಿಎಂಪಿ ಸೂಕ್ತ ಪರಿಶೀಲನೆ ಮಾಡಿಲ್ಲ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು: ಲಾಕ್'ಡೌನ್ ಪರಿಣಾಮ ನಗರದಲ್ಲಿ ವಾಸ್ತವವಾಗಿ ಎಷ್ಟು ವಲಸೆ ಕಾರ್ಮಿಕರು, ನಿರಾಶ್ರಿತರು ಹಾಗೂ ಕೂಲಿ ಕಾರ್ಮಿಕರು ಆಶ್ರಯ ಇಲ್ಲದೆ ರಸ್ತೆ ಹಾಗೂ ಸರ್ಕಾರಿ ಜಾಗಗಳಲ್ಲಿ ಉಳಿದುಕೊಂಡಿದ್ದಾರೆ ಎಂಬುದನ್ನು ಬಿಬಿಎಂಪಿ ಸೂಕ್ತ ಪರಿಶೀಲನೆ ಮಾಡಿಲ್ಲ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರದ ಮುಂಜಾಗ್ರತ ಕ್ರಮಗಳು ಮತ್ತು ಲಾಕ್'ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲತೆಗಳ ವಿಚಾರವಾಗಿ ಸಲ್ಲಿಸಲಾಗಿರುವ ಹಲವು ಸಾರ್ವಜನಿಕರ ಹಿತಾಸಕ್ತಿ ಅರ್ಜಿಗಲ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಾಪೀಠ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದೆ.
ಅಲ್ಲದೆ, ಕೂಡಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಮಧ್ಯಪ್ರವೇಶ ಮಾಡಿ ನಗರದಲ್ಲಿರುವ ನಿರಾಶ್ರಿತರು, ವಲಸೆ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಮತ್ತು ನಿರ್ಗತಿಕರಿಗೆ ಆಶ್ರಯ ಕಲ್ಪಿಸುವ ಸಂಬಂಧ ನಿರ್ದೇಶನಗಳನ್ನು ಬಿಬಿಎಂಪಿಗೆ ನೀಡುವಂತೆ ತಿಳಿಸಿ ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಬಿಬಿಎಂಪಿ ಸೂಕ್ತ ವರದಿಯನ್ನು ಸಲ್ಲಿಸಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


