ರೈತರ ಉತ್ಪನ್ನ ಹಾಳಾಗುವುದು ಬೇಡ, ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು ಜನಪ್ರತಿನಿಧಿಗಳಿಗೆ ಡಿಕೆಶಿ ಮನವಿ
ರೈತರ ಉತ್ಪನ್ನ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು ಜನಪ್ರತಿನಿಧಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

ಬೆಂಗಳೂರು: ರೈತರ ಉತ್ಪನ್ನ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಲು ಜನಪ್ರತಿನಿಧಿಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ರೈತರು ತಮ್ಮ ಹೊಲಗಳಲ್ಲಿ ಬೆಳೆದಿರುವ ಸೊಪ್ಪು, ಹಣ್ಣು, ತರಕಾರಿಗಳನ್ನು ಮಾರುಕಟ್ಟೆಯಲ್ಲಿ ಖರೀದಿಸದ ಪರಿಣಾಮ ಬೆಳೆಗಳೆಲ್ಲಾ ಹಾಳಾಗುತ್ತಿವೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲ ಸಂಸದರು, ಶಾಸಕರುಗಳು, ಎಲ್ಲ ರಾಜಕೀಯ ಪಕ್ಷಗಳ ನಾಯಕರು, ಜನಪ್ರತಿನಿಧಿಗಳು, ಪದಾಧಿಕಾರಿಗಳು, ಕಾರ್ಯಕರ್ತರು ಅವರವರ ಕ್ಷೇತ್ರಗಳಲ್ಲಿ ಹಾಗೂ ಜಿಲ್ಲೆಗಳಲ್ಲಿ ರೈತರು ಬೆಳೆದಿರುವ ಹಣ್ಣು, ತರಕಾರಿ ಹಾಗೂ ಸೊಪ್ಪುಗಳನ್ನು ಮಾರುಕಟ್ಟೆ ದರದಲ್ಲಿ ಖರೀದಿಸಿ ಬಡವರಿಗೆ ಉಚಿತವಾಗಿ ಹಂಚಬೇಕು ಎಂದು ಶಿವಕುಮಾರ್ ಹೇಳಿದ್ದಾರೆ.
ರೈತರ ಬೆಳೆಗಳ ಖರೀದಿ ಪಕ್ಷಾತೀತವಾಗಿ ನಡೆಯಬೇಕು.ಇದಕ್ಕೆ ಎಲ್ಲ ಪಕ್ಷದವರೂ ಕೈ ಜೋಡಿಸಬೇಕು. ಇದರಲ್ಲಿ ಯಾವುದೇ ರಾಜಕೀಯ ಹುಡುಕಬಾರದು. ರೈತರ ಸೇವೆಗೆ ನಾವೆಲ್ಲರೂ ಬದ್ಧರಾಗಿರಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


