ಜ್ಯೂಬ್ಲೆಂಟ್ ಜನರಿಕ್ ಮೆಡಿಸಿನ್ ಪ್ಲಾಂಟ್ ಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ: ಪರಿಶೀಲನೆ
ನಂಜನಗೂಡಿನ ಜ್ಯೂಬ್ಲೆಂಟ್ ಜನರಿಕ್ ಮೆಡಿಸಿನ್ ಪ್ಲಾಂಟ್ ಗೆ ಸ್ವತಃ ಸಹಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಇಂದು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಮೈಸೂರು: ಜಿಲ್ಲೆಯಲ್ಲಿ ಕೊರೋನಾ ವೈರಸ್ ಹೆಚ್ಚಳಗೊಳ್ಳಲು ಕಾರಣವಾಗಿರುವ ನಂಜನಗೂಡಿನ ಜ್ಯೂಬ್ಲೆಂಟ್ ಜನರಿಕ್ ಮೆಡಿಸಿನ್ ಪ್ಲಾಂಟ್ ಗೆ ಸ್ವತಃ ಸಹಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಇಂದು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ನಂಜನಗೂಡು ಶಾಸಕರಾದ ಬಿ. ಹರ್ಷವರ್ಧನ್, ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳು ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ವಿವರಿಸಿದರು. ಸುಮಾರು 20 ಮಂದಿ ಸೆಕ್ಯುರಿಟಿ ಅವರನ್ನು ಕಾರ್ಖಾನೆ ಒಳಗೇ ಕ್ವಾರೆಂಟೇನ್ ಮಾಡಿರುವ ಬಗ್ಗೆಯೂ ಮಾಹಿತಿ ಪಡೆದುಕೊಂಡರು. ಇವರು ಸೆಕೆಂಡರಿ ಕಾಂಟ್ಯಾಕ್ಟ್ ಆಗಿದ್ದು, ಆದರೂ ಆರೋಗ್ಯದ ದೃಷ್ಟಿಯಿಂದ ಕ್ರಮ ಕೈಗೊಂಡಿದ್ದಾಗಿ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದರು.
ಜ್ಯೂಬ್ಲೆಂಟ್ ಕಾರ್ಖಾನೆ ಭೇಟಿ ಬಳಿಕ ಹೋಂ ಕ್ವಾರೆಂಟೇನ್ ಪ್ರದೇಶಗಳಲ್ಲಿ ಪ್ರದಕ್ಷಿಣೆ ಹಾಕಿದ ಸಚಿವರು, ಸಾರ್ವಜನಿಕರಿಗೆ ಕೈಗೊಳ್ಳಲಾದ ಕ್ರಮಗಳ ಬಗ್ಗೆ ವಿವರ ಪಡೆದರು.ಹೋಂ ಕ್ವಾರೆಂಟೇನ್ ಗೆ ಒಳಗಾಗಿರುವ ದೇವಿರಮ್ಮನಹಳ್ಳಿ ಬಡಾವಣೆಗೆ ಭೇಟಿ ನೀಡಿದ ಸಚಿವರು, ಯೋಗಕ್ಷೇಮ ವಿಚಾರಿಸಿದರು.
ಬಳಿಕ ಅಧಿಕಾರಿಗಳ ಜೊತೆ ಚರ್ಚಿಸಿದ ಸಚಿವರು, ವಾಟ್ಸಾಪ್ ಗ್ರೂಪ್ ಗಳನ್ನು ರಚಿಸಿ ಜನರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಭಯ ಹೋಗಲಾಡಿಸುವುದು, ಈ ಪ್ರದೇಶಗಳಲ್ಲಿ ಫಾಗಿಂಗ್ ವ್ಯವಸ್ಥೆ ಮಾಡಬೇಕು. ಎಲ್ಲರ ಮನೆಗಳಿಗೆ ಜಾಗೃತಿ ಬಿತ್ತಿಪತ್ರಗಳನ್ನು ಅಂಟಿಸುವ ಕ್ರಮವಾಗಲಿ ಹಾಗೂ ಸ್ಯಾನಿಟೈಸರ್ ಗಳ ವಿತರಣೆಗೆ ಕ್ರಮ ವಹಿಸುವುದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು
ಐಸೋಲೇಶನ್ ಛತ್ರಕ್ಕೆ ಸಚಿವರ ಭೇಟಿ
ಭಿಕ್ಷುಕರು, ಅನಾಥರು, ನಿರಾಶ್ರಿತರ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿರುವ ಲಿಂಗಣ್ಣನವರ ಛತ್ರಕ್ಕೆ ಭೇಟಿ ನೀಡಿದ ಸಚಿವರು, ಆರೋಗ್ಯ ವಿಚಾರಿಸಿದರು. ಅಲ್ಲದೆ, ಇಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಪುರುಷರು ಹಾಗೂ ಮಹಿಳೆಯರನ್ನು ಪ್ರತ್ಯೇಕವಾಗಿಡಲಾಗಿದೆ. ಶಾಸಕರು, ಜಿಲ್ಲಾಧಿಕಾರಿಗಳು, ಎಸ್ಪಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಶ್ರಮಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಸಂಪೂರ್ಣ ಗುಣಮುಖವಾಗುವವರೆಗೆ ಜ್ಯೂಬ್ಲಿಯೆಂಟ್ ಕಾರ್ಖಾನೆಯನ್ನು ತೆರೆಯಲು ಅನುಮತಿ ಕೊಡುವುದಿಲ್ಲ. ಬಳಿಕ ಅವರೆಲ್ಲರಿಗೂ ಪರೀಕ್ಷೆ ನಡೆಸಿದ ಮೇಲೆಯೇ ಮುಂದಿನ ನಿರ್ಧಾರ ಎಂದು ಸಚಿವರು ತಿಳಿಸಿದರು.
ನಂಜನಗೂಡು ನಂಜುಂಡೇಶ್ವರ ದೇವರ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು, ನಾಡಿನ ಜನತೆಯನ್ನು ಶೀಘ್ರವಾಗಿ ಕೊರೋನಾ ಮಾರಿಯಿಂದ ಪಾರು ಮಾಡುವಂತೆ ನಂಜುಂಡೇಶ್ವರನಲ್ಲಿ ಪ್ರಾರ್ಥಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


