ರಾಜ್ಯ

ಕೊರೋನಾ ಲಾಕ್ ಡೌನ್ ಹಿನ್ನೆಲೆ: ಧರ್ಮಸ್ಥಳ ವಿಷು ಜಾತ್ರೆ, ರಥೋತ್ಸವ ರದ್ದು

ದೇಶಾದ್ಯಂತ ಕೊರೋನಾ ಲಾಕ್ ಡೌನ್ ಇರುವ ಕಾರಣ ಪ್ರಸಿದ್ದ ತೀರ್ಥ ಕ್ಷೇತ್ರವಾದ ಧರ್ಮಸ್ಥಳದಲ್ಲಿ ನಡೆಯಲಿದ್ದ ವಿಷು ಜಾತ್ರೆ, ನೇಮ ಕೋಲ ಹಾಗೂ ರಥೋತ್ಸವಗಳನ್ನು ರದ್ದು ಮಾಡಲಾಗಿದೆ.

ಕೊರೋನಾ ಲಾಕ್ ಡೌನ್ ಹಿನ್ನೆಲೆ: ಧರ್ಮಸ್ಥಳ ವಿಷು ಜಾತ್ರೆ, ರಥೋತ್ಸವ ರದ್ದು
Published On :

ಬೆಳ್ತಂಗಡಿ: ದೇಶಾದ್ಯಂತ ಕೊರೋನಾ ಲಾಕ್ ಡೌನ್ ಇರುವ ಕಾರಣ ಪ್ರಸಿದ್ದ ತೀರ್ಥ ಕ್ಷೇತ್ರವಾದ ಧರ್ಮಸ್ಥಳದಲ್ಲಿ ನಡೆಯಲಿದ್ದ ವಿಷು ಜಾತ್ರೆ, ನೇಮ ಕೋಲ ಹಾಗೂ ರಥೋತ್ಸವಗಳನ್ನು ರದ್ದು ಮಾಡಲಾಗಿದೆ.

ದೇವಪ್ರಶ್ನೆಯ ಮೂಲಕ ಪರಿಶೀಲಿಸಲಾಗಿ ವಿಷು ಜಾತ್ರೆ, ನೇಮ ಕೋಲ, ರಥೋತ್ಸವ ಇತ್ಯಾದಿ ಪೂರಕ  ಧಾರ್ಮಿಕ ಕಾರ್ಯಕ್ರಮಗಳೆಲ್ಲವನ್ನೂ ರದ್ದುಪಡಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷೇತ್ರದಲ್ಲಿ ಸಾಂಪ್ರದಾಯಿಕವಾಗಿ ನಡೆಯುವ ಧರ್ಮದೇವತೆಗಳ, ಶ್ರೀ ಅಣ್ಣಪ್ಪ ಸ್ವಾಮಿ ನೇಮ್ ಅಕೋಲಗಳು ಮುಂದೆ ಐದು ದಿನಗಳ ಕಾಲ ನಡೆಯಬೇಕಿದ್ದ ಮಂಜುನಾಥಸ್ವಾಮಿ ರಥೋತ್ಸವ ಸೇರಿದಂತೆ ಎಲ್ಲಾ ಆಚರಣೆಗಳನ್ನು ರದ್ದು ಮಾಡಲಾಗಿದೆ.

Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.