ಚಿತ್ತಾಪುರ: 2 ವರ್ಷದ ಮಗುವಿಗೆ ಕೊರೋನಾ ಸೋಂಕು,ಕಟ್ಟೆಚ್ಚರ- ಪ್ರಿಯಾಂಕ್ ಖರ್ಗೆ
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಪಿಲಕಮ್ಮ ಪ್ರದೇಶದಲ್ಲಿ 2 ವರ್ಷದ ಮಗುವಿಗೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ.

ಚಿತ್ತಾಪುರ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಪಿಲಕಮ್ಮ ಪ್ರದೇಶದಲ್ಲಿ 2 ವರ್ಷದ ಮಗುವಿಗೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ.
ತಾಲೂಕು ಅಧಿಕಾರಿಗಳು ಹಾಗೂ ಪುರಸಭೆ ಆಡಳಿತದೊಂದಿಗೆ ಶಾಸಕ ಪ್ರಿಯಾಂಕ್ ಖರ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಗೊಳ್ಳಲು ಸೂಚಿಸಿದ್ದಾರೆ. ಸಾರ್ವಜನಿಕರು ಭೀತಿಗೊಳಗಾಗುವ ಅಗತ್ಯವಿಲ್ಲ ಎಂದಿದ್ದಾರೆ.
ಈ ಪ್ರದೇಶವನ್ನು ಸಂಪೂರ್ಣ ಸೀಲ್ ಡೌನ್ ಮಾಡಿ, ಅಲ್ಲಿನ ಜನರನ್ನು ಪರೀಕ್ಷೆಗೆ ಒಳಪಡಿಸಲಿದ್ದೇವೆ. ಎಲ್ಲ ಕೌನ್ಸಿಲರ್‌ಗಳು ಮತ್ತು ಸ್ಥಳೀಯ ಮುಖಂಡರೊಂದಿಗೆ ವೈಯಕ್ತಿಕವಾಗಿ ಮಾತನಾಡಿದ್ದೇನೆ ಮತ್ತು ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲು ಅವರ ಸಹಕಾರ ನೀಡುವಂತೆ ಕೋರಿದ್ದೇನೆ. ಅಗತ್ಯ ವಸ್ತುಗಳನ್ನು ಸ್ಥಳೀಯವಾಗಿ ಸಿಗುವಂತೆ ಅಥವಾ ಮನೆ ಬಾಗಿಲಿಗೇ ಪೂರೈಸಲು ಕ್ರಮಕೈಗೊಳ್ಳಲಾಗುವುದ ಎಂದು ಪ್ರಿಯಾಂಕಾ ಖರ್ಗೆ ತಿಳಿಸಿದ್ದಾರೆ.
ತಮ್ಮ ಹಾಗೂ ತಮ್ಮವರ ಸುರಕ್ಷತೆಗಾಗಿ ನಾಗರಿಕರೆಲ್ಲರೂ ಸೀಲ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿ ವಿನಂತಿಸಿಕೊಳ್ಳುವುದಾಗಿ ಅವರು ಮನವಿ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


