ರಾಯಭಾಗ: ಸಿಡಿಲು ಬಡಿದು ತೆಂಗಿನ ಮರ ಭಸ್ಮ
ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರವು ದಗದಗ ಹೊತ್ತಿ ಉರಿದ ಘಟನೆ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

ರಾಯಬಾಗ:ತೆಂಗಿನ ಮರಕ್ಕೆ ಸಿಡಿಲು ಬಡಿದ ಪರಿಣಾಮ ಮರವು ದಗದಗ ಹೊತ್ತಿ ಉರಿದ ಘಟನೆ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.
ಚಿಂಚಲಿ ಪಟ್ಟಣದ ಈರಗಾರ ಎಂಬತರ ತೋಟದಲ್ಲಿ ಘಟನೆ ನಡೆದಿದ್ದು, ಘಟನೆಯಿಂದ ಜನರು ಭಯಭೀತರಾರದರು.
ಬೆಳಿಗ್ಗೆಯಿಂದ ಭೀಕರ ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ಸಂಜೆ ವೇಳೆಗೆ ಗುಡುಗು ಸಹಿತ ಗಾಳಿ ಜೋರಾಗಿ ಬೀಸತೊಡಗಿತು. ಅಲ್ಪಸ್ವಲ್ಪ ಮಳೆಯೂ ಆರಂಭವಾದಾಗ ಅಬ್ಬರದ ಸಿಡಿಲು ತೆಂಗಿನ ಮರದ ಸುಳಿಯಲ್ಲಿ ಬಡಿದ ಹಿನ್ನೆಲೆ ಸುತ್ತಮುತ್ತಲು ಪ್ರಕಾಶಗೊಂಡು ಬೆಂಕಿ ಹತ್ತಿ ಸ್ವಲ್ಪ ಹೊತ್ತು ದಗದಗ ಉರಿಯಿತು.
ಮೇಲಿಂದ ಬೆಂಕಿಯ ಕಣಗಳು ಕೆಳಗೆ ಬೀಳುತ್ತಿರುವ ಹಿನ್ನೆಲೆ ಜನರು ಅವುಗಳನ್ನುಆರಿಸಿದರು.. ಆದರೆ ಯಾವುದೇ ರೀತಿಯಾಗಿ ಪ್ರಾಣಾಪಾಯ ಸಂಭವಿಸಿಲ್ಲ.
ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


