ರಾಜ್ಯ

ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಪೂರೈಕೆ ಆರಂಭ

ಲಾಕ್ ಡೌನ್ ಅವಧಿಯಲ್ಲಿ ಜನರು ಮನೆಗಳಿಂದ ಹೊರಗೆ ಬಾರದಂತೆ ತಡೆಯುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಯೋಜನೆ ಆರಂಭಿಸಲಾಗಿದೆ.

ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಬಾಗಿಲಿಗೆ ಅಗತ್ಯ ವಸ್ತುಗಳ ಪೂರೈಕೆ ಆರಂಭ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಜನರು ಮನೆಗಳಿಂದ ಹೊರಗೆ ಬಾರದಂತೆ ತಡೆಯುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಯೋಜನೆ  ಆರಂಭಿಸಲಾಗಿದೆ.

ಬಸವನಗುಡಿ, ಜಯನಗರ, ಪದ್ಮನಾಭನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಸಹಾಯವಾಣಿಗೆ ಕಂದಾಯ ಸಚಿವ ಆರ್. ಅಶೋಕ್ ಈ ಕುರಿತ ಸಹಾಯವಾಣಿಗೆ ಚಾಲನೆ ನೀಡಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಆರ್. ಅಶೋಕ್, 'ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲಿರುವಂತೆ ಸೂಚಿಸಿದ್ದರೂ ಸಹ ಕಾಲ್ನಡಿಗೆಯಲ್ಲಿ ಮತ್ತು ವಾಹನಗಳಲ್ಲಿ ಜನ ಸಂಚರಿಸುವುದನ್ನು ತಪ್ಪಿಸುವುದು ಕಷ್ಟ ಸಾಧ್ಯವಾಗಿದೆ. ಈ ಕುರಿತು ಪೊಲೀಸರು ಪ್ರಶ್ನಿಸಿದಾಗ ಅಗತ್ಯ ವಸ್ತು  ಖರೀದಿಸಲು ಹೊರಬಂದಿರುವುದಾಗಿ ಉತ್ತರಿಸುತ್ತಿದ್ದಾರೆ. 

ಕೊರೊನಾ ಸೋಂಕು ಹರಡದಂತೆ ಎಚ್ಚರವಹಿಸಲು ಜನಜಂಗುಳಿಯನ್ನು ಕಡಿಮೆ ಮಾಡುವುದೊಂದೇ ಸದ್ಯದ ಉಪಾಯವಾಗಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳನ್ನು ಜನರಿಗೆ ಮನೆ ಬಾಗಿಲಲ್ಲೇ ತಲುಪಿಸುವ ಮೂಲಕ ಅವರು, ಹೊರಗೆ ಬರದಂತೆ ನೋಡಿಕೊಳ್ಳಬೇಕಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.