ನಾಲ್ಕು ಮಕ್ಕಳು ಸೇರಿದಂತೆ 17 ಕೊರೋನಾ ಪಾಸಿಟಿವ್ ಪ್ರಕರಣ: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 232ಕ್ಕೆ ಏರಿಕೆ
ರಾಜ್ಯದಲ್ಲಿ ಹೊಸದಾಗಿ 17 ಜನರಲ್ಲಿ ಕೊರೊನಾ ದೃಢಪಟ್ಟಿದ್ದು ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 232ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ತಗುಲಿದ್ದು, ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರು; ರಾಜ್ಯದಲ್ಲಿ ಹೊಸದಾಗಿ 17 ಜನರಲ್ಲಿ ಕೊರೊನಾ ದೃಢಪಟ್ಟಿದ್ದು ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 232ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ತಗುಲಿದ್ದು, ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ.
ಬೆಳಗಾವಿ ಜಿಲ್ಲೆಯ ರಾಯಭಾಗದ ಮೂವರಿಗೆ ಮತ್ತು ಹೀರೇಬಾಗೆವಾಡಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ವಿಜಯಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು ಮಾತ್ರವಲ್ಲದೇ 5 ಮಂದಿಗೆ ಬಂದಿದ್ದು ಗುಮ್ಮಟ ನಗರಿಯ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಕಲಬುರಗಿಯ ವೃದ್ಧನಿಂದ ಇಬ್ಬರಿಗೆ, ಮೈಸೂರಿನಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.
ಕರ್ನಾಟಕದಲ್ಲಿ ಒಟ್ಟು 6 ಮಂದಿ ಮೃತಪಟ್ಟಿದ್ದು, 54 ಮಂದಿ ಬಿಡುಗಡೆಯಾಗಿದ್ದಾರೆ. ರೋಗಿ 43, ರೋಗಿ 101, ರೋಗಿ 108-ಕೆ, ರೋಗಿ 195 ಐಸಿಯುನಲ್ಲಿದ್ದಾರೆ. ಇದುವರೆಗೂ ಕೊರೊನಾ ಪ್ರಕರಣಗಳು ಪತ್ತೆಯಾಗದ ವಿಜಯಪುರದಲ್ಲೂ ಒಂದೇ ದಿನ 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಈ ಮೂಲಕ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 232ಕ್ಕೆ ಏರಿದೆ. ಇದರಲ್ಲಿ 6 ಜನ ಸಾವನ್ನಪ್ಪಿದ್ದರೆ, 54 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಲಬುರಗಿಯ ಚಿತ್ತಾಪುರದಲ್ಲಿ 2 ವರ್ಷದ ಮಗುವಿಗೆ ಕೊರೊನಾ ಇರುವುದು ಖಚಿತವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಇದರ ಜೊತೆ ವಿಜಯಪುರದ ಕೊರೊನಾ ಸೋಂಕಿತ ಮಹಿಳೆ ಮನೆಗೆ ಹೋಗಿದ್ದ ಪಿಎಸ್‌ಐ ಹಾಗೂ ಇಬ್ಬರು ಪೇದೆಗಳನ್ನು ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗಿದೆ. ಬೆಂಗಳೂರಿನಲ್ಲಿ 76, ಮೈಸೂರು 48, ಬೆಳಗಾವಿ 14, ಕಲಬುರಗಿ 13,
ದಕ್ಷಿಣ ಕನ್ನಡ 12, ಬೀದರ್ 11 ಪ್ರಕರಣಗಳು ಕಂಡುಬಂದಿವೆ.
32 ವರ್ಷದ ಪುರುಷನಾಗಿದ್ದು, ಮೈಸೂರು ನಿವಾಸಿ. ರೋಗಿ ನಂಬರ್ 88ರ ಸಂಪರ್ಕದಲ್ಲಿದ್ದರು. ಅಲ್ಲದೇ ಫಾರ್ಮ ಕಂಪನಿಯ ಸಿಬ್ಬಂದಿಯಾಗಿದ್ದಾರೆ. ಮೈಸೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಬ್ಬ ರೋಗಿ 75 ವರ್ಷದ ವೃದ್ಧೆಯಾಗಿದ್ದು, ಬೆಂಗಳೂರು ನಿವಾಸಿ. ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೊರೊನಾ ಸೋಂಕು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂರನೇ ರೋಗಿ 58 ವರ್ಷದ ವ್ಯಕ್ತಿಯಾಗಿದ್ದು, ಬೆಂಗಳೂರು ನಿವಾಸಿ. ಇವರು ಮಾರ್ಚ್ 21 ರಂದು ಇಂಡೋನೇಷಿಯಾದಿಂದ ಭಾರತಕ್ಕೆ ವಾಸಪ್ ಬಂದಿದ್ದರು. ಹೀಗಾಗಿ ಸೋಂಕು ತಗುಲಿದೆ ಎನ್ನಲಾಗಿದೆ. ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 4ನೇ ರೋಗಿ 76 ವರ್ಷದ ವೃದ್ಧನಾಗಿದ್ದು, ಬೆಂಗಳೂರು ನಿವಾಸಿ. ತೀವ್ರ ಉಸಿರಾಟ
ತೊಂದರೆಯಿಂದ ಬಳಲುತ್ತಿದ್ದರಿಗೆ ಸೋಂಕು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತ್ತಿದ್ದಾರೆ.
19 ವರ್ಷದ ಪುರುಷ ರೋಗಿ ಸೇರಿದಂತೆ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.55 ವರ್ಷದ ವ್ಯಕ್ತಿ, ಬೆಳಗಾವಿಯ 25 ವರ್ಷದ ವ್ಯಕಿತ ಮತ್ತು ರಾಯಭಾಗದ 20 ವರ್ಷದ ಯುವಕ ಸೇರಿದಂತೆ ನಾಲ್ವರನ್ನು ಐಸಿಯುಗೆ ದಾಖಲಿಸಲಾಗಿದೆ. ಇದೇ ವೇಳೆ ಕೋರೋನಾ ಪೀಡಿತ ಗರ್ಭಿಣಿ ಸೇರಿದಂತೆ ಹಲವರನ್ನು ಸಂಬಂಧ ಪಟ್ಟ ಆಸ್ಪತ್ರೆಗಳಲ್ಲಿ ಐಸೋಲೇಷನ್ ನಲ್ಲಿಡಲಾಗಿದೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


