ಹೊಸಪೇಟೆ: ಸಚಿವ ಆನಂದ್ ಸಿಂಗ್'ರ ಆಹಾರ ಕಿಟ್ ಬಳಸಿ ಕೋಮು ಪ್ರಚೋದನೆಗೆ ಮುಂದಾಗಿದ್ದ ಯುವಕನ ಬಂಧನ
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವ ಪೋಸ್ಟ್ ಹಂಚಿಕೆ ಮಾಡಿದ ಶಿವರಾಜ್ ಎಂಬ ಯುವಕನನನ್ನು ಹಂಪಿ ಪೊಲೀಸರು ಬಂಧಿಸಿದ್ದಾರೆ.

ಹೊಸಪೇಟೆ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವ ಪೋಸ್ಟ್ ಹಂಚಿಕೆ ಮಾಡಿದ ಶಿವರಾಜ್ ಎಂಬ ಯುವಕನನನ್ನು ಹಂಪಿ ಪೊಲೀಸರು ಬಂಧಿಸಿದ್ದಾರೆ.
ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ನಿವಾಸಿ ಶಿವರಾಜ ನನ್ನು ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.
ಅರಣ್ಯ ಸಚಿವ ಆನಂದ್ ಸಿಂಗ್ ಅವರು ಬಡವರಿಗೆ ವಿತರಿಸಲು ಆಹಾರದ ಕಿಟ್‌ಗಳನ್ನು ಸಿದ್ಧಪಡಿಸುತ್ತಿರುವ ಚಿತ್ರಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ.
ಆನಂದ್ ಸಿಂಗ್ ಮುಸ್ಲಿಮರಿಂದ ಕಿಟ್‌ಗಳನ್ನು ತಯಾರಿಸುತ್ತಿದ್ದಾರೆ. ಅದರಿಂದ ಕೊರೊನಾ ಸೋಂಕು ತಗುಲಬಹುದು. ಹಾಗಾಗಿ ಯಾರೂ ಕಿಟ್‌ಗಳನ್ನು ಪಡೆಯಬಾರದು ಎಂದು ಶಿವರಾಜ ಪೋಸ್ಟ್ ಮಾಡಿದ್ದ ಈ ಸಂಭಂದ ಬಿಜೆಪಿ ಕಾರ್ಯಕರ್ತ ಬಸವರಾಜ ಎನ್ನುವವರು ಭಾನುವಾರ ದೂರು ದಾಖಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


