ಜಮಾತ್ ಗೆ ಹೋಗಿ ಬಂದು ಮಾಹಿತಿ ಕೊಡದ ತಬ್ಲೀಘಿಗಳ ವಿರುದ್ಧ ಎಫ್‌ಐಆರ್: ಬೊಮ್ಮಾಯಿ
ದೆಹಲಿಯ ನಿಜಾಮುದ್ದೀನ್ ಜಮಾತ್ ಗೆ ಹೋಗಿ ಬಂದು ಮಾಹಿತಿ ಕೊಡದ ತಬ್ಲೀಘಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಗೆ ಹೋಗಿ ಬಂದು ಮಾಹಿತಿ ಕೊಡದ ತಬ್ಲೀಘಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮಾತ್‌ನಲ್ಲಿ ಭಾಗವಹಿಸಿದವರು ದಯಮಾಡಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಗೃಹ ಸಚಿವರು ಮತ್ತೊಮ್ಮೆ ಮನವಿ ಮಾಡಿದ್ದಾರೆ.
ವಿಜಯಪುರದಲ್ಲಿ ಒಂದೇ ಕುಟುಂಬದ 5 ಜನರಿಗೆ ಸೋಂಕು ಕಂಡು ಬಂದಿದೆ. ಅವರ ಕುಟುಂಬ ವರ್ಗ, ಅವರ ಪ್ರಾಥಮಿಕ, ದ್ವಿತೀಯ ಸಂಪರ್ಕದವರನ್ನು ತಪಾಸಣೆ ಮಾಡಲು ಹೊರಟಿದ್ದರು. ಆದರೆ ಸ್ಥಳೀಯರು ಅದಕ್ಕೆ ವಿರೋಧ ವ್ಯಕ್ತಪಡಿಸಿ ನಮ್ಮ ಜಿಲ್ಲಾಡಳಿತಕ್ಕೆ ತೊಂದರೆ ಕೊಟ್ಟಿದ್ದರು. ಬಳಿಕ ಮೌಲ್ವಿಗಳ ಜತೆ ಮುಖ್ಯಮಂತ್ರಿಗಳು ಮಾತನಾಡಿದ ಬಳಿಕ ಎಲ್ಲರೂ ತಪಾಸಣೆಗೆ ಒಪ್ಪಿದ್ದಾರೆ.
ಕರ್ನಾಟಕದಲ್ಲಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದ್ದು ಇಂದು ಮತ್ತೆ 15 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಮೂವರು ಮಕ್ಕಳು ಕೂಡ ಸೇರಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 247ಕ್ಕೇರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


