ರಾಜ್ಯ

ಪೊಲೀಸರದ್ದು ಅತಿರೇಕದ ವರ್ತನೆ: ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ಸಿ.ಟಿ.ರವಿ ಕಿಡಿ

ತಬ್ಲೀಘಿ ಜಮಾತ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್‌ ಶೇರ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಕ್ಕೆ ಸಚಿವ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರದ್ದು ಅತಿರೇಕದ ವರ್ತನೆ: ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲಿಸಿದ್ದಕ್ಕೆ ಸಿ.ಟಿ.ರವಿ ಕಿಡಿ
ಸಿ.ಟಿ ರವಿ
Published On :

ಬೆಂಗಳೂರು: ತಬ್ಲೀಘಿ ಜಮಾತ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್‌ ಶೇರ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತರೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ್ದಕ್ಕೆ ಸಚಿವ ಸಿ ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಗೃಹ ಸಚಿವ ಹಾಗೂ ಸಹೋದ್ಯೋಗಿ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ ಎಂದು ಅವರು ಟ್ವೀಟ್‌‌ನಲ್ಲಿ ತಿಳಿಸಿದ್ದಾರೆ.

ತಬ್ಲಿಘಿ ಜಮಾತ್ ಬಗ್ಗೆ ವರದಿ ಪೋಸ್ಟ್ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿರುವ ಸಚಿವ ಸಿ.ಟಿ.ರವಿ ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿರುವುದು ಅತಿರೇಕದ ವರ್ತನೆ ಎಂದಿದ್ದಾರೆ.

ಕೊರೊನ ಸಂಬಂಧ ತಬ್ಲೀಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ಇದಕ್ಕಾಗಿ ಬೇಲೂರಿನ ನಮ್ಮ ಕಾರ್ಯಕರ್ತ ತೇಜ್ ಕುಮಾರ್ ಶೆಟ್ಟಿ ಅವರ ಮೇಲೆ ಕೇಸ್ ಹಾಕಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಟ್ವೀಟ್ ಮಾಡಿದ್ದಾರೆ.

ದೆಹಲಿಯ ನಿಜಾಮುದ್ದೀನ್‌ ಪ್ರದೇಶದಲ್ಲಿ ತಬ್ಲೀಘಿ ಜಮಾತ್‌ ಧಾರ್ಮಿಕ ಸಭೆಯಲ್ಲಿ ಭಾಗಿಯಾದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಇದೇ ಸಂದರ್ಭದಲ್ಲಿ ಕೆಲವರು ಒಂದು ಸಮುದಾಯದ ವಿರುದ್ಧ ವಿವಾದಾತ್ಮಕವಾದ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದರು.

ಈ ಚರ್ಚೆಯ ಕುರಿತಾಗಿ ಮಾಧ್ಯಮಗಳಲ್ಲಿ ಪ್ರತಿಕ್ರಿಯೆ ನೀಡಿದ್ದ ಸಿಎಂ ಬಿಎಸ್‌ ಯಡಿಯೂರಪ್ಪ ಕೊರೊನಾ ವಿಚಾರವಾಗಿ ಒಂದು ಸಮುದಾಯದ ಮೇಲೆ ಆರೋಪ ಮಾಡುವ ಕೆಲಸ ಯಾರಾದರೂ ಮಾಡಿದರೆ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.