ಹರಿಕಥಾ ವಿದ್ವಾನ್ ಶೋಭಾ ನಾಯ್ಡು ವಿಧಿವಶ
ಮೂರು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಮಾಡಿದ್ದ ಹರಿಕಥಾ ವಿದ್ವಾಂಸ ಗುರುರಾಜುಲು ನಾಯ್ಡು ಅವರ ಪುತ್ರಿ ಶೋಭಾ ನಾಯ್ಡು ಅವರು ವಿಧಿವಶರಾಗಿದ್ದಾರೆ.

ಬೆಂಗಳೂರು: ಮೂರು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಮಾಡಿದ್ದ ಹರಿಕಥಾ ವಿದ್ವಾಂಸ ಗುರುರಾಜುಲು ನಾಯ್ಡು ಅವರ ಪುತ್ರಿ ಶೋಭಾ ನಾಯ್ಡು ಅವರು ವಿಧಿವಶರಾಗಿದ್ದಾರೆ.
ತಂದೆ ಗುರುರಾಜುಲು ನಾಯ್ಡು ಅವರ ವಿರೋಧದ ನಡುವೆಯೂ ಶೋಭಾ ನಾಯ್ಡು ಅವರು ಹರಿಕಥೆ ಮಾಡುವುದನ್ನು ಬಿಟ್ಟಿರಲಿಲ್ಲ. ಇನ್ನು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆಲವೇ ಕೆಲ ಸಂಬಂಧಿಕರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಇನ್ನು ಶೋಭಾ ನಾಯ್ಡು ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಗುರುರಾಜುಲು ನಾಯ್ಡು ಅವರ ನಿಧನದ ಬಳಿಕ ಶೋಭಾ ನಾಯ್ಡು ಅವರು ಬೆಂಗಳೂರಿಗೆ ಬಂದರು. ಭಾರತೀಯ ವಿಮಾನ ಕಾರ್ಖಾನೆಯಲ್ಲಿ ನೌಕರಿಗೆ ಸೇರಿದರು. ಸಮಯ ಸಿಕ್ಕಾಗ ಹರಿಕಥೆ ಮಾಡುತ್ತಾ ಜೊತೆಗೆ ನಾಟಕಗಳಲ್ಲಿಯೂ ಅಭಿನಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


