ರಾಜ್ಯ

ವಿಜಯಪುರದಲ್ಲಿ ಕೊರೋನಾ ಸೋಂಕಿನ ಮೂಲ ಮಹಾರಾಷ್ಟ್ರ!

ನಗರದ ಎರಡು ಕುಟುಂಬಗಳ ಆರು ಮಂದಿಗೆ ಕೊರೋನಾ ಪಾಸಿಟಿವ್ ಮಹಾರಾಷ್ಟ್ರ ಮೂಲದಿಂದ ಬಂದಿದೆ ಎಂದು ವಿಜಯಪುರ ಜಿಲ್ಲಾಡಳಿತ ಶಂಕೆ ವ್ಯಕ್ತಪಡಿಸಿದೆ.

ವಿಜಯಪುರದಲ್ಲಿ ಕೊರೋನಾ ಸೋಂಕಿನ ಮೂಲ ಮಹಾರಾಷ್ಟ್ರ!
ಆರೋಗ್ಯ ಕಾರ್ಯಕರ್ತರಿಂದ ಸ್ಯಾನಿಟೈಸರ್
Published On :

ವಿಜಯಪುರ: ನಗರದ ಎರಡು ಕುಟುಂಬಗಳ ಆರು ಮಂದಿಗೆ ಕೊರೋನಾ ಪಾಸಿಟಿವ್ ಮಹಾರಾಷ್ಟ್ಪ ಮೂಲದಿಂದ ಬಂದಿದೆ ಎಂದು ವಿಜಯಪುರ ಜಿಲ್ಲಾಡಳಿತ ಶಂಕೆ ವ್ಯಕ್ತಪಡಿಸಿದೆ.

ಕೊರೋನಾ  ಪೀಡಿತ ವೃದ್ಧೆ ಮತ್ತು ಆಕೆಯ ಪತಿ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗಾಗಿ ಮಹಾರಾಷ್ಟ್ರಕ್ಕೆ ತೆರಳಿದ್ದರು.  ಅಲ್ಲಿಂದ ಇವರಿಗೆ ಸೋಂಕು ತಗುಲಿದೆ ಎನ್ನಲಾಗಿದೆ, ಇನ್ನು ಪುಣೆಗೆ ತೆರಳಿದ್ದ ಮತ್ತೊಂದು ಕುಟುಂಬದ ಐವರಿಗೂ ಅಲ್ಲಿಂದಲೇ ಸೋಂಕು ಆವರಿಸಿದೆ ಎನ್ನಲಾಗಿದೆ.ಈ ಎರಡು ಕುಟುಂಬಗಳೂ ವೈರಸ್ ಪೀಡಿತ ಮಹಾರಾಷ್ಟ್ರಕ್ಕೆ ತೆರಳಿದ್ದರಿಂದ ಅಲ್ಲಿಂದಲೇ  ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ವೈಎಸ್ ಪಾಟೀಲ್ ಹೇಳಿದ್ದಾರೆ.

ಸೋಂಕಿತ ವೃದ್ಧೆ ಏಪ್ರಿಲ್ 6ರಂದು ಎರಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗದ ಕಾರಣ ಇನ್ನೊಂದು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅಲ್ಲಿಯು ಕೂಡ ಚಿಕಿತ್ಸೆ ನೀಡಿದ್ದರೂ ಗುಣಮುಖವಾಗಿರಲಿಲ್ಲ, ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಒಂದು ವೇಳೆ ಖಾಸಗಿ ಆಸ್ಪತ್ರೆಯವರು ನಿಯಮ ಉಲ್ಲಂಘನೆ ಮಾಡಿದ್ದರೇ ಕ್ರಮ ಕೈಗೊಳ್ಳುವುದಾಗಿ ಸಹ ತಿಳಿಸಿದ್ದಾರೆ.

ಕೊರೋನಾ ಸೋಂಕಿತ ವೃದ್ಧೆಯ ಕುಟುಂಬಸ್ಥರು ಮಾಹಿತಿ ನೀಡಲು ಸಹಕರಿಸುತ್ತಿಲ್ಲ, ವೃದ್ಧೆ ಮತ್ತು ಆಕೆ ಪತಿ ಕಾಲ್ ಹಿಸ್ಟರಿಯನ್ನು ಕುಟುಂಬಸ್ಥರು ಡಿಲೀಟ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.