ರಾಜ್ಯ

ರಾಜ್ಯದಲ್ಲಿ ಒಂದೇ ದಿನ 17 ಕೊರೋನಾ ಪ್ರಕರಣ ಪತ್ತೆ: ಒಟ್ಟು ಸಂಖ್ಯೆ 277ಕ್ಕೆ ಏರಿಕೆ, 2 ಸಾವು

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೈಸೂರಿನ ನಂಜನಗೂಡು ಒಂದಲ್ಲೇ 8 ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಲಬುರಗಿಯ 1 ವರ್ಷದ ಮಗುವಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಒಂದೇ ದಿನ 17 ಕೊರೋನಾ ಪ್ರಕರಣ ಪತ್ತೆ: ಒಟ್ಟು ಸಂಖ್ಯೆ 277ಕ್ಕೆ ಏರಿಕೆ, 2 ಸಾವು
ಕೊರೋನಾ ಸೋಂಕು
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೈಸೂರಿನ ನಂಜನಗೂಡು ಒಂದಲ್ಲೇ 8 ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಲಬುರಗಿಯ 1 ವರ್ಷದ ಮಗುವಿಗೆ ಸೋಂಕು ತಗುಲಿದೆ. 

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 17 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮೃತರ ಸಂಖ್ಯೆ 11ಕ್ಕೇರಿಕೆಯಾಗಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 277ಕ್ಕೇರಿಕೆಯಾಗಿದೆ. 

ಮೈಸೂರಿನ ನಂಜನಗೂಡಿನಲ್ಲೇ 8 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ನಂಜನಗೂಡಿನ 41, 30, 27,35,26,35,32 ವರ್ಷದ ವ್ಯಕ್ತಿಗಳಿಗೆ ಸೋಂಕು ತಗಲಿದೆ. ಜೊತೆಗೆ, ಕಲಬುರಗಿಯ ಒಂದು ವರ್ಷದ ಮಗು ಇನ್ ಫ್ಲ್ಯುಯೆನ್ಸಾ ಲೈಕ್ ಇಲ್ ನೆಸ್ ಎಂಬ ರೋಗಕ್ಕೆ ತುತ್ತಾಗಿದೆ. ಬಿಬಿಎಂಪಿ ವ್ಯಾಪ್ತಿಯ 59 ವರ್ಷದ ವೃದ್ಧ, ಬಾಗಲಕೋಟೆಯ 52 ವರ್ಷದ ವ್ಯಕ್ತಿ, ಬಾಗಲಕೋಟೆ ಜಮಖಂಡಿಯ 39 ವರ್ಷದ ವ್ಯಕ್ತಿ, ಮೈಸೂರಿನ 28, 72 ವರ್ಷದ ವ್ಯಕ್ತಿ, ವಿಜಯಪುರದ 38 ವರ್ಷದ ಮಹಿಳೆ ಮತ್ತು 25 ವರ್ಷದ ವ್ಯಕ್ತಿ ಮತ್ತು ಬೆಂಗಳೂರು ನಗರದ 32 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. 

ಚಿಕ್ಕಬಳ್ಳಾಪುರದ 65 ವರ್ಷದ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ವ್ಯಕ್ತಿಯಲ್ಲಿ ಎನ್ 1ಎನ್1, ಅತಿಯಾದ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.