ಮಂಡ್ಯ: :ಇಂದು ನಗರಕ್ಕೆ ಸಂಸದೆ ಸುಮಲತಾ ಭೇಟಿ;ರೈತರಿಂದ ತರಕಾರಿ ಖರೀದಿಗೆ ಚಾಲನೆ
ಸಂಸದೆ ಸುಮಲತಾ ಅಂಬರೀಶ್ ಅವರು ಏ.೧೬ ರಂದು ಬೆಳಿಗ್ಗೆ ೧೧.೪೫ ಗಂಟೆಗೆ ನಗರಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತ ವ್ಯಕ್ತಿ ವಾಸವಿರುವ ಸ್ವರ್ಣಸಂದ್ರದ ಬಡಾವಣೆಯ ಪರಿವೀಕ್ಷಣೆ ನಡೆಸಲಿದ್ದಾರೆ.

ಮಂಡ್ಯ: :ಸಂಸದೆ ಸುಮಲತಾ ಅಂಬರೀಶ್ ಅವರು ಏ.೧೬ ರಂದು ಬೆಳಿಗ್ಗೆ ೧೧.೪೫ ಗಂಟೆಗೆ ನಗರಕ್ಕೆ ಭೇಟಿ ನೀಡಿ ಕೊರೊನಾ ಸೋಂಕಿತ ವ್ಯಕ್ತಿ ವಾಸವಿರುವ ಸ್ವರ್ಣಸಂದ್ರದ ಬಡಾವಣೆಯ ಪರಿವೀಕ್ಷಣೆ ನಡೆಸಲಿದ್ದಾರೆ.
ಮಧ್ಯಾಹ್ನ ೧೨ ಗಂಟೆಗೆ ಮಂಡ್ಯ ಕೋವಿಡ್-೧೯ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಸಭೆ ನಡೆಸುವರು.
ಸಭೆಯ ಬಳಿಕ ಸುಮಲತಾ ಅಂಬರೀಶ್ ಅವರು ಸಂಕಷ್ಟದಲ್ಲಿರುವ ರೈತರಿಂದ ಹಣ್ಣು ಮತ್ತು ತರಕಾರಿ ಖರೀದಿಸಿ ಕೊವಿಡ್-೧೯ ಸೋಂಕಿನಿAದ ನಿರ್ಬಂಧಿತವಾಗಿರುವ ಪ್ರದೇಶಗಳಿಗೆ ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಚಾಲನೆ ನೀಡಲಿದ್ದಾರೆ ಎಂದು ಸಂಸದರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-ನಾಗಯ್ಯ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


