ರಾಜ್ಯ

ಕೊರೋನಾ ಎಫೆಕ್ಟ್: ಮಾಸ್ಕ್ ಧರಿಸಿದ್ದರಷ್ಟೇ ಬಂಕ್'ಗಳಲ್ಲಿ ಪೆಟ್ರೋಲ್

ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಗ್ರಾಹಕರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಿದ್ದರೆ ಮಾತ್ರ ಬಂಕ್ ಗಳಲ್ಲಿ ವಾಹನಗಳಿಗೆ ಪೆಟ್ರೋಲ್-ಡೀಸೆಲ್ ನೀಡಲಾಗುತ್ತದೆ.

ಕೊರೋನಾ ಎಫೆಕ್ಟ್: ಮಾಸ್ಕ್ ಧರಿಸಿದ್ದರಷ್ಟೇ ಬಂಕ್'ಗಳಲ್ಲಿ ಪೆಟ್ರೋಲ್
ಸಂಗ್ರಹ ಚಿತ್ರ
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಗ್ರಾಹಕರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಿದ್ದರೆ ಮಾತ್ರ ಬಂಕ್ ಗಳಲ್ಲಿ ವಾಹನಗಳಿಗೆ ಪೆಟ್ರೋಲ್-ಡೀಸೆಲ್ ನೀಡಲಾಗುತ್ತದೆ. 

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಇರುವ ಪ್ರದೇಶಗಳ ಪೆಟ್ರೋಲ್ ಬಂಕ್ ಮಾಲೀಕರು ಸಿಬ್ಬಂದಿಯ ಸುರಕ್ಷತೆ ದೃಷ್ಟಿಯಿಂದ ಇಂತಹ ಒಂದು ತೀರ್ಮಾನ ಕೈಗೊಂಡಿದ್ದಾರೆಂದು ತಿಳಿದಿಬಂದಿದೆ. ಈ ನಿಟ್ಟಿನಲ್ಲಿ ಬಂಕ್ ಮಾಲೀಕರು ಮಾಸ್ಕ್ ಧರಿಸಿದ್ದರೆ ಮಾತ್ರ ಪೆಟ್ರೋಲ್-ಡೀಸೆಲ್ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಭಿತ್ತಿ ಫಲಕ ಅಂಟಿಸಿದ್ದಾರೆ. 

ಪೆಟ್ರೋಲ್-ಡೀಸೆಲ್ ಅಗತ್ಯ ಸೇವಾ ವ್ಯಾಪ್ತಿಗೆ ಬರುವುದರಿಂದ ಆತಂಕದ ನಡುವೆಯೂ ಪೆಟ್ರೋಲ್ ಬಂಕ್ ತೆರೆದು ಸೇವೆ ನೀಡಲಾಗುತ್ತಿದೆ. ರೆಡ್ ಅಲರ್ಟ್ ಇರುವ ಪ್ರದೇಶಗಳ ಪೆಟ್ರೋಲ್ ಬಂಕ್ ಗಳ ಸಿಬ್ಬಂದಿಯ ಸುರಕ್ಷತೆ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಎಲ್ಲಾ ಬಂಕ್ ಗಳಲ್ಲಿ ಇದನ್ನು ಕಡ್ಡಾಯಗೊಳಿಸಲು ಸಾಧ್ಯವಿಲ್ಲ. ಸುರಕ್ಷತೆ ದೃಷ್ಟಿಯಿಂದ ಹೇಳಿದರೂ ಕೆಲ ಗ್ರಾಹಕರು ಕೇಳಿಸಿಕೊಳ್ಳುವುದಿಲ್ಲ. ಹೀಗಾಗಿ ರೆಡ್ ಅಲರ್ಟ್ ಇರುವ ಪ್ರದೇಶಗಳಲ್ಲಿ ಮಾತ್ರ ಈ ಮಾಸ್ಕ್ ಕಡ್ಡಾಯ ಎಂದು ಸೂಚಿಸಲಾಗಿದೆ ಎಂದು ಬೆಂಗಳೂರು ಪೆಟ್ರೋಲ್ ಡೀಲರ್ ಅಸೋಸಿಯೇಷನ್ ಅಧ್ಯಕ್ಷ ಡಾ.ಬಾಲಾಜಿ ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.