ರಾಜ್ಯ

ರವಿ ಪೂಜಾರಿ ಬಂಧನ ಹಿನ್ನೆಲೆ: ಮಾಜಿ ಡಾನ್ ಮುತ್ತಪ್ಪ ರೈ ವಿಚಾರಣೆ

ಭೂಗತ ಪಾತಕಿ ರವಿ ಪೂಜಾರಿ ಭಾಗಿಯಾದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರನ್ನು ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರ ತಂಡ ತೀವ್ರ ವಿಚಾರಣೆ ನಡೆಸಿದೆ.

ರವಿ ಪೂಜಾರಿ ಬಂಧನ ಹಿನ್ನೆಲೆ: ಮಾಜಿ ಡಾನ್ ಮುತ್ತಪ್ಪ ರೈ ವಿಚಾರಣೆ
ಮುತ್ತಪ್ಪ ರೈ
Published On :

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಭಾಗಿಯಾದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರನ್ನು ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರ ತಂಡ ತೀವ್ರ ವಿಚಾರಣೆ ನಡೆಸಿದೆ.

ಮುತ್ತಪ್ಪ ರೈ ಅನಾರೋಗ್ಯದಲ್ಲಿ ಇರುವುದರಿಂದ ಅವರ ಮನೆಗೆ ತೆರಳಿ ವಿಚಾರಣೆ ನಡೆಸಲಾಗಿದೆ. ಸಿಸಿಬಿ ಎಸಿಪಿ ವೇಣುಗೋಪಾಲ್ ನೇತೃತ್ವದ ಆಧಿಕಾರಿಗಳ ತಂಡ ರೈ ಅವರನ್ನು ಸುಮಾರು ಎರಡು ತಾಸು ವಿಚಾರಣೆಗೆ ಒಳಪಡಿಸಿದೆ' ಎಂದು ಸಿಸಿಬಿ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದ್ದಾರೆ.

ಕ್ಯಾನ್ಸರ್ ಪೀಡಿತರಾಗಿರುವ ರೈ ಅವರ ಆರೋಗ್ಯ ಕೆಲವು ತಿಂಗಳುಗಳಿಂದ ತೀವ್ರ ಹದಗೆಟ್ಟಿದೆ. ರವಿ ಪೂಜಾರಿ ಭಾಗಿಯಾದ ಕೆಲವು ಪ್ರಕರಣಗಳಲ್ಲಿ ರೈ ಹೆಸರೂ ತಳುಕು ಹಾಕಿಕೊಂಡಿದೆ. ಆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿದೆ. ಕೆಲವು ಮಹತ್ವದ ಸಂಗತಿಗಳನ್ನು ರೈ ಹಂಚಿಕೊಂಡಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ರಾಜ್ಯ ಪೊಲೀಸರ ತಂಡ ಇತ್ತೀಚೆಗೆ ದಕ್ಷಿಣ ಆಫ್ರಿಕಾದ ಸೆನಗಲ್‌ನಲ್ಲಿ ವಶಕ್ಕೆ ಪಡೆದು ಕರೆದುಕೊಂಡು ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.