ರಾಜ್ಯ

ಕೂಡಲೇ ಕರ್ತವ್ಯಕ್ಕೆ ಹಾಜರಾಗಿ: ಸರ್ಕಾರಿ ನೌಕರರಿಗೆ ಆದೇಶ

ಲಾಕ್'ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸರ್ಕಾರಿ ಕಚೇರಿಗಳ ಪೈಕಿ ಅತ್ಯಗತ್ಯ ಸೇವೆ ಒದಗಿಸುವ ಆರೋಗ್ಯ ಇಲಾಖೆ ಸೇರಿದಂತೆ 14 ಇಲಾಖೆಯ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಕೂಡಲೇ ಕರ್ತವ್ಯಕ್ಕೆ ಹಾಜರಾಗಿ: ಸರ್ಕಾರಿ ನೌಕರರಿಗೆ ಆದೇಶ
ಸಂಗ್ರಹ ಚಿತ್ರ
Published On :

ಬೆಂಗಳೂರು: ಲಾಕ್'ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸರ್ಕಾರಿ ಕಚೇರಿಗಳ ಪೈಕಿ ಅತ್ಯಗತ್ಯ ಸೇವೆ ಒದಗಿಸುವ ಆರೋಗ್ಯ ಇಲಾಖೆ ಸೇರಿದಂತೆ 14 ಇಲಾಖೆಯ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ. 

ಸಚಿವಾಲಯ ಸೇರಿ ಅಗತ್ಯ ಸೇವೆ ಒದಗಿಸುತ್ತಿರುವ ಆರೋಗ್ಯ, ವೈದ್ಯಕೀಯ, ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವದ್ಧಿ, ನಗರಾಭಿವೃದ್ಧಿ, ಆಹಾರ, ವಾರ್ತಾ, ಸಾರಿಗೆ, ಇಂಧನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಹಣಕಾಸು, ಪಶುಸಂಗೋಪನೆ ಮತ್ತು ಅರಣ್ಯ ಇಲಾಖೆಯ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. 

ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಇದರಂತೆ ಮಾರ್ಚ್ 24 ರಿಂದಲೂ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಲಾಗಿತ್ತು. ರಜೆ ಬೇಕೆನ್ನುವ ನೌಕರರು ರಜೆ ತೆಗೆದುಕೊಂಡು ಸೆಲ್ಫ್ ಕ್ವಾರಂಟೈನ್ ನಲ್ಲಿರಬಹುದು ಎಂದು ಸರ್ಕಾರ ತಿಳಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.