ಲಾಕ್ ಡೌನ್: ಬಿಬಿಎಂಪಿ ಆಯುಕ್ತರಿಂದ ಮಾಂಸ ಮಾರಾಟಕ್ಕೆ ದರ ನಿಗದಿ
ಲಾಕ್ ಡೌನ್ ಅವಧಿಯಲ್ಲಿ ಜನರು ಕುರಿ, ಮೇಕೆ, ಕೋಳಿ ಮಾಂಸಗಳಿಗೆ ಹೆಚ್ಚಿನ ದರ ವಿಧಿಸಿ ಮಾರಾಟ ಮಾಡುತ್ತಿರುವ ಆರೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗ ಮಾಂಸಕ್ಕೆ ದರ ನಿಗದಿಪಡಿಸಿದೆ

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಜನರು ಕುರಿ, ಮೇಕೆ, ಕೋಳಿ ಮಾಂಸಗಳಿಗೆ ಹೆಚ್ಚಿನ ದರ ವಿಧಿಸಿ ಮಾರಾಟ ಮಾಡುತ್ತಿರುವ ಆರೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗ ಮಾಂಸಕ್ಕೆ ದರ ನಿಗದಿಪಡಿಸಿದೆ
ಮಾರಾಟಗಾರರು ಏಕಾಏಕಿ ಹೆಚ್ಚಿಸುತ್ತಿರುವುದರಿಂದ ಗ್ರಾಹಕರಿಗೆ ಅನಗತ್ಯ ಆರ್ಥಿಕ ಹೊರೆ ಸೃಷ್ಟಿಯಾಗಿರುತ್ತದೆ. ಗ್ರಾಹಕ ರಕ್ಷಣಾ ಕಾಯ್ದೆಯ ಅನ್ವಯ ಇದನ್ನು ನ್ಯಾಯ ಸಮ್ಮತವಲ್ಲದ ವಹಿವಾಟು ಎಂದು ಪರಿಗಣಿಸಲಾಗಿರುತ್ತದೆ. ಗ್ರಾಹಕರ ಹಿತದೃಷ್ಟಿಯಿಂದ ಮತ್ತು ಮಾಂಸ/ಮೀನು ಮುಂತಾದವುಗಳು ಅಗತ್ಯ ವಸ್ತುಗಳ ಪಟ್ಟಿಯಲ್ಲಿ ಬರುವುದರಿಂದ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯ ಸೀಮಿತಕ್ಕೊಳಪಟ್ಟಂತೆ ಬಿಬಿಎಂಪಿ ನಿಗದಿಪಡಿಸಿದ ದರಗಳನ್ನು ಮೀರದಂತೆ ಮಾಂಸವನ್ನು ಮಾರಾಟ ಮಾಡಬಹುದು ಎಂದು ಆಯುಕ್ತರು ಆದೇಶದಲ್ಲಿ ಸೂಚಿಸಿದ್ದಾರೆ.
ಪಾಲಿಕೆ ಸೂಚಿಸಿರುವ ದರಗಳಿಗಿಂತ ಹೆಚ್ಚಿನ ದರದಲ್ಲಿ ಮಾಂಸ ಮಾರಾಟ ಮಾಡುವವರ ವಿರುದ್ಧ 1976ರ ಕರ್ನಾಟಕ ಮುನ್ಸಿಪಲ್ ಕಾಯ್ದೆ ಅಡಿಯಲ್ಲಿ ನಿಯಮಾನುಸಾರ ಕ್ರಮ ಜರುಗಿಸುವುದಾಗಿ ಆಯುಕ್ತರು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


