ಎಪಿಎಲ್ ಫಲಾನುಭವಿಗಳಿಗೂ ಮೇ 1 ರಿಂದ ಅಗ್ಗದ ದರದಲ್ಲಿ ಪಡಿತರ ಪೂರೈಕೆ: ಗೋಪಾಲಯ್ಯ
ಕೇಂದ್ರ ದಿಂದ ರಾಜ್ಯಕ್ಕೆ ಸಾಕಷ್ಟು ಪಡಿತರ ದಾಸ್ತಾನು ಬಂದಿದ್ದು ಮೇ ಒಂದರಿಂದ ಎಪಿಎಲ್ ಪಡಿತರ ಚೀಟಿದಾರರಿಗೂ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ಪೂರೈಕೆಯಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

ಬೆಂಗಳೂರು: ಕೇಂದ್ರ ದಿಂದ ರಾಜ್ಯಕ್ಕೆ ಸಾಕಷ್ಟು ಪಡಿತರ ದಾಸ್ತಾನು ಬಂದಿದ್ದು ಮೇ ಒಂದರಿಂದ ಎಪಿಎಲ್ ಪಡಿತರ ಚೀಟಿದಾರರಿಗೂ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ಪೂರೈಕೆಯಾಗಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು ಸಾಕಷ್ಟು ದಾಸ್ತಾನು ಬಂದಿದ್ದು, ಯಾವುದೇ ಕೊರತೆ ಇಲ್ಲ ಒಂದು ವರ್ಷಕ್ಕಿಂತಲೂ ಹೆಚ್ಚಿನ ದಾಸ್ತಾನು ರಾಜ್ಯದಲ್ಲಿ ಲಭ್ಯವಿದೆ ಎಂದು ಹೇಳಿದರು.
ಇದೆ 30ನೇ ರೊಳಗೆ ಎಲ್ಲಾ ಪಡಿತರ ಅಂಗಡಿಗಳಿಗೆ ದವಸ ಧಾನ್ಯಗಳ ಪೂರೈಕೆಗೆ ಕ್ರಮ ವಹಿಸಲಾಗಿದೆ ಮೇ ಒಂದರಿಂದ ಎಪಿಎಲ್ ಪಡಿತರ ಚೀಟಿದಾರರಿಗೂ ಕೆಜಿ ಗೆ 15ರೂ ದರದಲ್ಲಿ 10 ಕೆಜಿ ಅಕ್ಕಿ ಜೊತೆಗೆ , 1ಕೆಜಿ ತೊಗರಿ ಬೇಳೆ ವಿತರಣೆ ಮಾಡಲಾಗುತ್ತದೆ ಅವರು ಹೇಳಿದರು.
ಶೇಕಡಾ 91ರಷ್ಟು ಪಡಿತರ ಅಂಗಡಿಗಳಲ್ಲಿ ಎರಡು ತಿಂಗಳ ಪಡಿತರ ವಿತರಣೆಯಾಗಿದ್ದು, ರಾಜ್ಯದ ಇತಿಹಾಸದಲ್ಲಿ ದಾಖಲೆಯಾಗಿದೆ ಎಂದರು. 2.22 ಲಕ್ಷ ಬಿಪಿಎಲ್ ಕಾರ್ಡ್ ಗೆ ಅರ್ಜಿ ಹಾಕಿದ್ದು, 1.90 ಲಕ್ಷ ಅರ್ಜಿ ವಿಲೇವಾರಿ ಆಗಬೇಕು. ಅರ್ಜಿ ಹಾಕಿದವರಿಗೂ ಪಡಿತರ ಆಹಾರ ಸಮಾಗ್ರಿಯನ್ನು ಪೂರೈಕೆ ಮಾಡಲಾಗುವುದು ಎಂದು ಎಂದರು.
ಮುಗ್ಗಲು ಅಕ್ಕಿ ವಿತರಣೆ ಕಂಡುಬಂದರೆ ಕ್ರಮ ಜರುಗಿಸುವಾದಿ ಎಚ್ಚರಿಕೆ ನೀಡಿದ ಸಚಿವರು ಈವರಗೆ 12,558 ಪಡಿತರ ಅಂಗಡಿಗಳ ಮೇಲೆ ಈವರೆಗೆ ದಾಳಿ ಮಾಡಲಾಗಿದೆ ಉಜ್ವಲ ಮತ್ತು ಸಿಎಂ ಅನಿಲ ಭಾಗ್ಯ ಯೋಜನೆಯನ್ನು ಮೂರು ತಿಂಗಳ ವರೆಗೂ ವಿಸ್ತರಿಸಲಾಗಿದೆ ಎಂದೂ ಸಚಿವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


