ರಾಜ್ಯ

ಕೊರೋನಾ ವಿರುದ್ಧ ಹೋರಾಟ: 2 ಲಕ್ಷ ಟೆಸ್ಟ್ ಕಿಟ್ಸ್ ಖರೀದಿಗೆ ಕರ್ನಾಟಕ ನಿರ್ಧಾರ

ಕೊರೋನಾ ವಿರುದ್ಧ ಕಠಿಣ ಹೋರಾಟ ನಡೆಸುತ್ತಿರುವ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 2 ಲಕ್ಷ ರ್ಯಾಪಿಡ್ ಟೆಸ್ಟ್ ಕಿಟ್ಸ್'ಗಳ ಖರೀದಿಗೆ ನಿರ್ಧರಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಕೊರೋನಾ ವಿರುದ್ಧ ಹೋರಾಟ: 2 ಲಕ್ಷ ಟೆಸ್ಟ್ ಕಿಟ್ಸ್ ಖರೀದಿಗೆ ಕರ್ನಾಟಕ ನಿರ್ಧಾರ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೊರೋನಾ ವಿರುದ್ಧ ಕಠಿಣ ಹೋರಾಟ ನಡೆಸುತ್ತಿರುವ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 2 ಲಕ್ಷ ರ್ಯಾಪಿಡ್ ಟೆಸ್ಟ್ ಕಿಟ್ಸ್'ಗಳ ಖರೀದಿಗೆ ನಿರ್ಧರಿಸಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಹಿರಿಯ ಅಧಿಕಾರಿಗಳು ಹಾಜರಿದ್ದು, ಸಭೆಯಲ್ಲಿ ಹೆಚ್ಚುವರಿಯಾಗಿ 2 ಲಕ್ಷ ರ್ಯಾಪಿಡ್ ಟೆಸ್ಟ್ ಕಿಟ್ಸ್ ಖರೀದಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ. 

ಅಧಿಕೃತವಾಗಿ ಪಟ್ಟಿಯಲ್ಲಿರುವ ಕಂಪನಿಗಳಿಗೆ ಕಿಟ್ ಗಳನ್ನು ರಫ್ತು  ಮಾಡಲು ಈಗಾಗಲೇ ಚೀನಾ ಸರ್ಕಾರ ಒಪ್ಪಿಗೆ ನೀಡಿದ್ದು, ಟೆಸ್ಟ್ ಕಿಟ್ ಗಳು ಕೈ ಸೇರುತ್ತಿದ್ದಂತೆಯೇ ಪರೀಕ್ಷೆಗಳ ಸಂಖ್ಯೆಗಳನ್ನು ಹೆಚ್ಚಿಸಲಾಗುತ್ತದೆ ಎಂದು ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ. 

ಅಗತ್ಯವಿರುವ 25,000 ಆರ್'ಟಿ-ಪಿಆರ್ಆರ್ ಕಿಟ್ಸ್ ಗಳಿಗೆ ಈಗಾಗಲೇ ಒಪ್ಪಿಗೆ ಸಿಕ್ಕಿವೆ. ಸೋಂಕು ಪೀಡಿತರಿಗೆ ಸರ್ಕಾರ ನೇಮಕ ಮಾಡಿಕೊಂಡಿರುವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಈಗಾಗಲೇ ಜನರ ಪ್ರಶ್ನೆಗಳಿಗೆ ಉತ್ತರ ನೀಡಲು ಪ್ರತ್ಯೇಕ ಕೊರೋನಾ ವೈರಸ್ ಸಹಾಯವಾಣಿಯನ್ನೂ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.