ರಾಜ್ಯ

ಬಾಗಲಕೋಟೆ: ಕೋವಿಡ್ ಸೋಂಕಿತ ವ್ಯಕ್ತಿಯ ತಾಯಿ ಹೃದಯಾಘಾತದಿಂದ ಸಾವು

ಕೋವಿಡ್ ಸೋಂಕಿತ ವ್ಯಕ್ತಿಯ ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಮಖಂಡಿಯಲ್ಲಿ ಶನಿವಾರ ರಾತ್ರಿ ನಡೆದಿದೆ

ಬಾಗಲಕೋಟೆ: ಕೋವಿಡ್ ಸೋಂಕಿತ ವ್ಯಕ್ತಿಯ ತಾಯಿ ಹೃದಯಾಘಾತದಿಂದ ಸಾವು
ಸಾಂದರ್ಭಿಕ ಚಿತ್ರ
Published On :

ಬಾಗಲಕೋಟೆ: ಕೋವಿಡ್ ಸೋಂಕಿತ ವ್ಯಕ್ತಿಯ ತಾಯಿ  ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಮಖಂಡಿಯಲ್ಲಿ ಶನಿವಾರ ರಾತ್ರಿ  ನಡೆದಿದೆ

ಹೃದಯಾಘಾತದಿಂದ ಮೃತಪಟಿರುವ ೭೧ ವರ್ಷದ ವಯೋವೃದ್ಧೆಗೆ ಯಾವುದೇ ರೀತಿಯ ಕೋವಿಡ್ ಲಕ್ಷಣಗಳು ಇರಲಿಲ್ಲ ಎಂದು ಜಮಖಂಡಿಯ ತಾಲೂಕು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಗನಿಗೆ ಸೋಂಕು ಇರುವುದು ಸಂಜೆ ದೃಢಪಟ್ಟಿತ್ತು.

ವಯೋವೃದ್ಧೆ ಅಧಿಕ ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದರು ಎಂಬುದು ತಿಳಿದುಬಂದಿದೆ. ಮಗನಿಗೆ ಸೋಂಕು ದೃಢವಾದ ಸುದ್ದಿ ತಿಳಿದು ಬೇಸರಗೊಂಡಿದ್ದ ಅವರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ 

ಮೃತ ವೃದ್ಧೆಯನ್ನು ಕೋವಿಡ್-19 ನಿಯಾಮವಳಿ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.