ಬೆಳಗಾವಿ: ಬೈಕ್ ಸ್ಕೀಡ್ ಆಗಿ ಅಪಘಾತ, ಲಾಕ್ ಡೌನ್ ಕರ್ತವ್ಯ ನಿರ್ವಹಿಸಲು ಬರುತ್ತಿದ್ದ ಪಿಎಸ್ ಐ ಸಾವು
ಲಾಕ್ ಡೌನ್ ಕರ್ತವ್ಯ ನಿರ್ವಹಿಸಲು ಬರುತ್ತಿದ್ದ ಪಿಎಸ್ಐ ಓರ್ವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿಯಲ್ಲಿ ಶನಿವಾರ ನಡೆದಿದೆ.

ಬೆಳಗಾವಿ: ಲಾಕ್ ಡೌನ್ ಕರ್ತವ್ಯ ನಿರ್ವಹಿಸಲು ಬರುತ್ತಿದ್ದ ಪಿಎಸ್ಐ ಓರ್ವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿಯಲ್ಲಿ ಶನಿವಾರ ನಡೆದಿದೆ.
ಖಡೇಬಜಾರ್ ಪೊಲೀಸ್ ಠಾಣೆಯ ಮನೋಹರ್ ಗಣಾಚಾರಿ ಮೃತಪಟ್ಟ ಪಿಎಸ್ಐ. ಯಳ್ಳೂರು ಗ್ರಾಮದಿಂದ ಗಣಾಚಾರಿ ಅವರು ಬೆಳಗಾವಿ ಮಹಾನಗರದಲ್ಲಿ ಲಾಕ್ ಡೌನ್ ಬಂದೊಬಸ್ತ್ ಕರ್ತವ್ಯಕ್ಕಾಗಿ ಬರುತ್ತಿದ್ದಾಗ ಯಳ್ಳೂರು ಸಮೀಪದ ಕೆಎಲ್ ಇ ಆಸ್ಪತ್ರೆ ಬಳಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬರುತ್ತಿದ್ದಾಗ ನಾಯಿ ಅಡ್ಡ ಬಂದಿದೆ. ಪ್ರಾಣಿಯನ್ನು ಉಳಿಸಲು ಹೋಗಿ ಸ್ಕಿಡ್ ಆಗಿ ಅವರು ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದರಿಂದ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಮೃತಪಟ್ಟ ಮನೋಹರ ಗಣಾಚಾರಿ ಅವರು, ಆರು ತಿಂಗಳ ಹಿಂದಷ್ಟೇ ಬಡ್ತಿ ಹೊಂದಿ ಪಿಎಸ್ಐ ಆಗಿದ್ದರು. ಕಳೆದ ವರ್ಷ ಯಳ್ಳೂರಿನಲ್ಲಿ ಮನೆ ಕಟ್ಟಿಸಿದ್ದು, ಮುಂದಿನ ಸೆಪ್ಟೆಂಬರ್ ತಿಂಗಳಲ್ಲಿ ನಿವೃತ್ತಿಯಾಗುವವರಿದ್ದರು. ಅಷ್ಟರಲ್ಲೇ ಈ ದುರಂತ ಸಂಭವಿಸಿದೆ. ಮೃತರು ಪತ್ನಿ, ಪುತ್ರ, ಮತ್ತು ತಂದೆ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


