ರಾಜ್ಯ

ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ: ಸಿದ್ದರಾಮಯ್ಯ

ಕೊರೋನಾ ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ: ಸಿದ್ದರಾಮಯ್ಯ
ಕೊರೊನಾ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಬಿಬಿಎಂಪಿ ಆಯುಕ್ತರಾದ ಅನಿಲ್ ಕುಮಾರ್ ಅವರು ಇಂದಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದರು.
Published On :

ಬೆಂಗಳೂರು: ಕೊರೋನಾ ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕೇರಳದಲ್ಲಿ ಈ ಹಿಂದೆ ವಿದೇಶಗಳಿಂದ ಬಂದವರ ಸಂಖ್ಯೆ ಹೆಚ್ಚಾಗಿತ್ತು. ಆದರೂ ಅಲ್ಲಿ ಸೋಂಕು ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದ್ದರಿಂದ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ.ಯಾಕೆ ಹೀಗಾಗುತ್ತಿದೆ ಎಂದು ಅಧ್ಯಯನ ನಡೆಸುವುದು ಸೂಕ್ತ ಎಂದು ಹೇಳಿದ್ದಾರೆ.

ಸೋಂಕು ಕಂಡು ಬಂದ ಸಂದರ್ಭದಲ್ಲೇ ಸರ್ಕಾರ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ಈ ಕುರಿತು ನಾವು ಸಹ ಸರ್ಕಾರಕ್ಕೆ ಸಲಹೆ ನೀಡಿದ್ದೆವು. ವಿಧಾನ ಮಂಡಲ ಅಧಿವೇಶನ ಮುಂದೂಡಿ ಕೊರೊನಾ ಸೋಂಕಿನತ್ತ ಗಮನ ಹರಿಸಿ ಎಂದು ಹೇಳಿದ್ದೆವು. ಆಗ ಸರ್ಕಾರ ವಿಳಂಬ ಮಾಡಿದ್ದರಿಂದಲೇ ಪರಿಸ್ಥಿತಿ ಇಂದು ಈ ಹಂತ ತಲುಪಿದೆ ಎಂದು ಆರೋಪಿಸಿದ್ದಾರೆ.

ಮೈಸೂರಿನ ಜ್ಯುಬಿಲಿಯೆಂಟ್ ಕಾರ್ಖಾನೆಯಲ್ಲಿ ಚೀನಾದ ಕಂಟೈನರ್ ಗಳಿಂದ ಸೋಂಕು ಬಂದಿದೆ ಎಂದು ಹೇಳಲಾಗಿತ್ತು, ಆದರೆ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಅಲ್ಲಿ ಕ್ವಾರಂಟೈನ್ ಸರಿಯಾಗಿ ಪಾಲಿಸುತ್ತಿದ್ದರೆ ಇಷ್ಟು ವೇಗವಾಗಿ ಸೋಂಕು ಹರಡುತ್ತಿರಲಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.