ರಾಜ್ಯ

ಕಾರ್ಮಿಕರಿಗಾಗಿ ವಿಶೇಷ ಪ್ಯಾಕೇಜ್ ಗಾಗಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ ಎಂಬುದು ಗೊತ್ತಿದೆ. ಆದರೂ ಕೈ ಕಟ್ಟಿ ಕೂರುವಂತಿಲ್ಲ, ಲಾಕ್‍ಡೌನ್ ಮುಗಿಯುವವರೆಗೆ ರೈತರು, ಕಾರ್ಮಿಕರು, ಬಡವರು ಸೇರಿದಂತೆ ಅಸಹಾಯಕರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕಾರ್ಮಿಕರಿಗಾಗಿ ವಿಶೇಷ ಪ್ಯಾಕೇಜ್ ಗಾಗಿ ಸಿದ್ದರಾಮಯ್ಯ ಒತ್ತಾಯ
ಸಿದ್ದರಾಮಯ್ಯ
Published On :

ಬೆಂಗಳೂರು:ರಾಜ್ಯದ ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ ಎಂಬುದು ಗೊತ್ತಿದೆ. ಆದರೂ ಕೈ ಕಟ್ಟಿ  ಕೂರುವಂತಿಲ್ಲ, ಲಾಕ್‍ಡೌನ್ ಮುಗಿಯುವವರೆಗೆ ರೈತರು, ಕಾರ್ಮಿಕರು, ಬಡವರು ಸೇರಿದಂತೆ  ಅಸಹಾಯಕರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ  ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕೆಪಿಸಿಸಿ  ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರೊಂದಿಗೆ ಗೃಹ  ಕಚೇರಿ ಕೃಷ್ಣಾದಲ್ಲಿ ಅವರು, ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮಾತನಾಡಿದರು.

ದ್ವಿಚಕ್ರ  ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಹೇಳಿ ಬಳಿಕ ಆದೇಶ ವಾಪಸ್ ಪಡೆದಿದ್ದು  ಸರಿಯಾಗಿದೆ. ಲಾಕ್‍ಡೌನ್ ನಿಯಮಗಳು ನೂರಕ್ಕೆ ನೂರರಷ್ಟು ಪಾಲನೆ ಆಗಬೇಕು. ಇದರಲ್ಲಿ  ಯಾವುದೇ ರಿಯಾಯಿತಿ ಬೇಡ ಎಂದರು.

ಜೀವ ಮತ್ತು ಜೀವನವನ್ನು ಉಳಿಸಿ, ಬೆಳೆಸಲು, ಹದಗೆಟ್ಟಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕೂಡಲೇ ರಾಜಕೀಯ ತಜ್ಞರು, ಆರ್ಥಿಕ ತಜ್ಞರು, ಉದ್ಯಮಿಗಳು, ಕಾರ್ಮಿಕ ಸಂಘಟನೆಗಳ ನಾಯಕರಗಳನ್ನು ಒಳಗೊಂಡಿರುವ ಕಾರ್ಯಪಡೆಯನ್ನು ರಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಲಾಕ್‍ಡೌನ್ ಅವಧಿಯಲ್ಲಿ ಸರ್ಕಾರದಿಂದ ಹಂಚಿಕೆ ಮಾಡುತ್ತಿರುವ ಆಹಾರ ಪದಾರ್ಥಗಳ ಕಿಟ್ ಮೇಲೆ ಆಡಳಿತ ಪಕ್ಷದ ನಾಯಕರುಗಳು ತಮ್ಮ ಪಕ್ಷದ ಚಿನ್ಹೆ ಹೊಂದಿರುವ ಲೇಬಲ್‍ಗಳನ್ನು ಅಂಟಿಸಿ ಮತದಾರರನ್ನು ಓಲೈಸಿಕೊಳ್ಳುವ ಹೀನ ರಾಜಕೀಯ ಪ್ರವೃತ್ತಿಯನ್ನು ತೋರುತ್ತಿದ್ದಾರೆ. ಇಂತಹ ಸರ್ಕಾರಿ ಸೌಲಭ್ಯಗಳ ದುರುಪಯೋಗವನ್ನು ತಡೆಯಬೇಕು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.