ಚಿಕ್ಕೋಡಿ: ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರುತ್ತಿದ್ದ ಇಬ್ಬರ ಬಂಧನ
ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ

ಚಿಕ್ಕೋಡಿ : ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ
ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ ರಿಯಾನ್ ಆಯಾಜ್ ಮಡ್ಡೆ (19) ಬಂಧಿತರು. ಈ ಯುವಕರು ಕಲ್ಲಂಗಡಿ ಹಣ್ಣುಗಳನ್ನ ಚರಂಡಿಯಲ್ಲಿ ತೊಳೆದು ಮಾರಾಟ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ವಿಡಿಯೋವನ್ನು ನೋಡಿದ್ದ ನಿಪ್ಪಾಣಿಯ ಕೆಲವರು ಆರೋಪಿಗಳನ್ನು ಗುರುತಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳು ಈ ಕೃತ್ಯವನ್ನು ಮಾರ್ಚ್ 28ರಂದು ಎಸಗಿದ್ದು, ವಿಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಬಸವೇಶ್ವರ ಚೌಕ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳನ್ನ ಬಂಧಿಸಿ ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


