ಹಿರಿಯ ಸಾಹಿತಿ ಚಂದ್ರಕಾಂತ ಕುಸನೂರ ನಿಧನ
ಕನ್ನಡದ ಖ್ಯಾತ ಸಾಹಿತಿ ಚಂದ್ರಕಾಂತ ಕುಸನೂರ ಅವರು ಕಳೆದ ರಾತ್ರಿ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.

ಬೆಂಗಳೂರು:ಕನ್ನಡದ ಖ್ಯಾತ ಸಾಹಿತಿ ಚಂದ್ರಕಾಂತ ಕುಸನೂರ ಅವರು ಕಳೆದ ರಾತ್ರಿ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪತ್ನಿ, ನಾಲ್ವರು ಗಂಡುಮಕ್ಕಳು ಹಾಗೂ ಒಬ್ಬ ಮಗಳನ್ನು ಅಗಲಿದ್ದಾರೆ.
ಚಂದ್ರಕಾಂತ ಕುಸನೂರ ಅವರು ಕನ್ನಡದ ಖ್ಯಾತ ಸಾಹಿತಿಗಳು ಹಾಗು ರಂಗಕರ್ಮಿಗಳು.ಇವರು 1931ರಲ್ಲಿ ಕಲಬುರಗಿಯ ಕುಸನೂರಲ್ಲಿ ಜನಿಸಿದರು. ಎಂ.ಎ, ಬಿ.ಇಡಿ ಪದವಿಗಳನ್ನು ಪಡೆದಿದ್ದಾರೆ.ಕಲಬುರ್ಗಿ ಹಿಂದಿ ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು.ಕಲಬುರಗಿಯಲ್ಲಿ "ರಂಗ ಮಾಧ್ಯಮ"ಎಂಬ ನಾಟಕ ಸಂಸ್ಥೆಯ ಸ್ಥಾಪಕರಾಗಿದ್ದರು. ಕನ್ನಡದಲ್ಲಿ ಅಬ್ಬರ್ಡ್ ಮಾದರಿ ನಾಟಕಗಳನ್ನು ರಚಿಸಿದರು.
1975ರಲ್ಲಿ “ಯಾತನಾ ಶಿಬಿರ” ಕಾದಂಬರಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಪುರಸ್ಕಾರ ಲಭಿಸಿದೆ.1992 ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಗೌರವ ಪ್ರಶಸ್ತಿ ನೀಡಲಾಗಿದೆ.2006ನೆಯ ಸಾಲಿನ ನಾಡೋಜ ಪ್ರತಿಷ್ಠಾನದ ಅರವಿಂದ ಪ್ರಶಸ್ತಿ ದೊರೆತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


