ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ: 59 ಜನರ ಬಂಧನ, 5 ಎಫ್ಐಆರ್, ಘಟನಾ ಸ್ಥಳಕ್ಕೆ ಗೃಹ ಸಚಿವರ ಭೇಟಿ
ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 59 ಮಂದಿಯನ್ನು ಬಂಧಿಸಲಾಗಿದ್ದು, 5 ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 59 ಮಂದಿಯನ್ನು ಬಂಧಿಸಲಾಗಿದ್ದು, 5 ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 59 ಮಂದಿಯನ್ನು ಬಂಧಿಸಲಾಗಿದೆ. ಘಟನೆಯಾದ 3-4 ಗಂಟೆಯಲ್ಲಿ ಎಲ್ಲಾ ಪ್ರಮುಖರನ್ನ ಅರೆಸ್ಟ್ ಮಾಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಂಬಂಧ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿದ್ದೇವೆ. ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಂತಹ ಕೃತ್ಯಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ. ಇನ್ನೂ ಕಾರ್ಯಾಚರಣೆ ಮುಂದುವರೆದಿದ್ದು, ಎಲ್ಲರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಸ್ತುತ ನಾನು ಘಟನೆ ನಡೆದ ಪಾದರಾಯನ ಪುರಕ್ಕೆ ತೆರಳುತ್ತಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಇತ್ತ ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಗೃಹ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಪುಂಡರ ವಿರುದ್ಧ ಐದು ಪ್ರಕರಣ
ಪೊಲೀಸರು, ವೈದ್ಯರು ಮತ್ತು ಆಶಾಕಾರ್ಯಕರ್ತೆಯರ ವಿರುದ್ಧ ಹಲ್ಲೆ ಮಾಡಿದ್ದ ಪುಂಡರ ವಿರುದ್ಧ ಇದೀಗ ಪೊಲೀಸರು ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಐಪಿಸಿ ಸೆಕ್ಷನ್ 353, 307, ಎನ್ ಡಿಎಂಎ 353, 332, 354, 201ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಒಟ್ಟಾರೆ ಸುಮಾರು 60 ಮಂದಿಯನ್ನು ಬಂಧಿಸಿದ್ದಾರೆ. ಇನ್ನು ಗಲಾಟೆ ವೇಳೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಅನ್ನು ಎಳೆದು ಬಿಸಾಕಿದ್ದ ಓರ್ವ ಮಹಿಳೆಯನ್ನೂ ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಮಹಿಳೆಯನ್ನು ಫರೋಜಾ ಅಲಿಯಾಸ್ ಲೇಡಿಡಾನ್ ಎಂದು ಗುರುತಿಸಲಾಗಿದ್ದು, ಈ ಹಿಂದೆ ಇದೇ ಮಹಿಳೆ ಗಾಂಜಾ ಮಾರಾಟ ಮಾಡಿ ಪೊಲೀಸರ ಅತಿಥಿಯಾಗಿದ್ದಳು ಎನ್ನಲಾಗಿದೆ. ಈಕೆಯೇ ಗಲಾಟೆಗಾಗಿ ಹುಡುಗರನ್ನು ಕರೆಸಿದ್ದಾಳೆ ಎಂಬ ಮಾಹಿತಿ ಇದೆ. ಹೀಗಾಗಿ ಆಕೆಯನ್ನೂ ಬಂಧಿಸಲಾಗಿದೆ. ಅಲ್ಲದೆ ಆಕೆ ನೀಡಿರುವ ಮಾಹಿತಿ ಮೇರೆಗೆ 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೆಂದು ಮುಖರ್ಜಿ ಹೇಳಿದ್ದಾರೆ.
Related Article
ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ 'ಬಲಿ' ಹಾಕಬೇಕು: ಎಚ್ ಡಿ ಕುಮಾರಸ್ವಾಮಿ
ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ: ಘಟನೆ ಖಂಡಿಸಿದ ರಾಜಕೀಯ ನಾಯಕರು
ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣ: ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಹೇಳಿದ್ದೇನು ಗೊತ್ತಾ?
ಪಾದರಾಯನಾಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ; 54ಕ್ಕೂ ಹೆಚ್ಚು ಮಂದಿ ವಶಕ್ಕೆ, 4 ಎಫ್ ಐಆರ್
ಬೆಂಗಳೂರು: ಕೊರೋನಾ ಹಾಟ್ ಸ್ಪಾಟ್ ಪಾದರಾಯನಪುರದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಕಿತ್ತು ಹಾಕಿ ನೂರಾರು ಮಂದಿ ದಾಂಧಲೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


