ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣ: ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಹೇಳಿದ್ದೇನು ಗೊತ್ತಾ?
ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಮಂದಿಯನ್ನು ಕ್ವಾರಂಟೈನ್ ಮಾಡಲು ಹೋಗಿದ್ದ ಪೊಲೀಸರು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ಪಾದರಾಯನಪುರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಮಂದಿಯನ್ನು ಕ್ವಾರಂಟೈನ್ ಮಾಡಲು ಹೋಗಿದ್ದ ಪೊಲೀಸರು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ಪಾದರಾಯನಪುರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.
ಘಟನೆ ನಡೆದ ಸುಮಾರು ಗಂಟೆಗಳ ಬಳಿಕ ಇದೇ ಮೊದಲ ಬಾರಿಗೆ ಈ ಕುರಿತು ಟ್ವೀಟ್ ಮಾಡಿರುವ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, 'ನಿನ್ನೆ ಪಾದರಾಯನಪುರ ಬಡಾವಣೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ನಿನ್ನೆ ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಮಂದಿಯನ್ನು ಕ್ವಾರಂಟೈನ್ ಮಾಡಲು ಹೋಗಿದ್ದ ಪೊಲೀಸರು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ಪಾದರಾಯನಪುರದ ನಿವಾಸಿಗಳ ಪೈಕಿ ಕೆಲವರ ಗುಂಪು ಹಲ್ಲೆ ಮಾಡಿತ್ತು. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು ಟೆಂಟ್ ಗಳನ್ನು ಧ್ವಂಸಗೊಳಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಕಡಿಮೆ ಸಂಖ್ಯೆಯಲ್ಲಿರೋದನ್ನು ಗಮನಿಸಿದ ಪುಡಿ ರೌಡಿಗಳು ದಾಂಧಲೆಯನ್ನು ನಡೆಸಿದ್ದರು. ಈ ವೇಳೆ ಪೊಲೀಸರೇ ಕೈ ಮುಗಿದು ಹೀಗೆ ಮಾಡಬೇಡಿ ಎಂದು ಬೇಡಿಕೊಂಡರೂ ಕೇಳದ ಪುಂಡರು, ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಪೊಲೀಸರು ನಿರ್ಮಿಸಿಕೊಂಡಿದ್ದ ಟೆಂಟ್ ಮತ್ತು ಟೇಬಲ್ ಗಳನ್ನು ಮುರಿದು ಕೌರ್ಯ ಮೆರೆದಿದ್ದರು. ಮಹಿಳೆಯರೂ ಎಂದೂ ನೋಡದೆ ಆಶಾ ಕಾರ್ಯಕರ್ತೆಯರನ್ನೂ ಅಟ್ಟಾಡಿಸಿಕೊಂಡು ಹೋಗಿ ಹಲ್ಲೆಗೆ ಮುಂದಾಗಿದ್ದರು.
ಘಟನೆಗೆ ಸಂಬಂಧಿಸಿದಂತೆ ಇದೀಗ ದೇಶವ್ಯಾಪಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
Related Article
ಪಾದರಾಯನಾಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ; 54ಕ್ಕೂ ಹೆಚ್ಚು ಮಂದಿ ವಶಕ್ಕೆ, 4 ಎಫ್ ಐಆರ್
ಬೆಂಗಳೂರು: ಕೊರೋನಾ ಹಾಟ್ ಸ್ಪಾಟ್ ಪಾದರಾಯನಪುರದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಕಿತ್ತು ಹಾಕಿ ನೂರಾರು ಮಂದಿ ದಾಂಧಲೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


