ರಾಜ್ಯ

ಬೆಂಗಳೂರು: ಪೊಲೀಸರ ಜೊತ ಅಸಭ್ಯ ವರ್ತನೆ, ಇಬ್ಬರು ಮಹಿಳೆಯರ ಬಂಧನ

ಚೆಕ್ ಪೋಸ್ಟ್ ಬಳಿ ಪೊಲೀಸರ ಜೊತೆ ಅಸಭ್ಯವಾಗಿ ವರ್ತಿಸಿ ಪರಾರಿಯಾಗಲು ಯತ್ನಿಸಿದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಪೊಲೀಸರ ಜೊತ ಅಸಭ್ಯ ವರ್ತನೆ, ಇಬ್ಬರು ಮಹಿಳೆಯರ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಚೆಕ್ ಪೋಸ್ಟ್ ಬಳಿ ಪೊಲೀಸರ ಜೊತೆ ಅಸಭ್ಯವಾಗಿ ವರ್ತಿಸಿ ಪರಾರಿಯಾಗಲು ಯತ್ನಿಸಿದ ಇಬ್ಬರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಮಧುಮಿತ ನಟರಾಜನ್ ಮತ್ತು ಶಕ್ತಿ ನಾಯರ್ ಬಂಧಿತರು. ಎಚ್ ಎ ಎಲ್ ರಸ್ತೆಯಲ್ಲಿ ಜೆಬಿ ನಗರ ಪೊಲೀಸ್ ಸಿಬ್ಬಂದಿ ಕಾರುಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಆರೋಪಿಗಳ ಕಾರನ್ನು ಪೊಲೀಸರು ತಡೆದಿದ್ದಾರೆ. ಆದರೆ ಕಾರು ನಿಲ್ಲಿಸದೇ ಇಬ್ಬರು ಪರಾರಿಯಾಗಲು ಯತ್ನಿಸಿದ್ದಾರೆ.

ಸುಮಾರು 1 ಕಿಮೀ ಹಿಂಬಾಲಿಸಿದ ಪೊಲೀಸರು ಕೊನೆಗೂ ಅವರ ಕಾರನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಪೊಲೀಸರ ಜೊತೆ ಅನುಚಿತವಾಗಿ ವರ್ತಿಸಿದ ಮಹಿಳೆ ತನ್ನ ಬಳಿ ಪಾಸ್ ಇರುವುದಾಗಿ ಹೇಳಿದ್ದಾಳೆ.

ಕುಡಿದ ಮತ್ತಿನಲ್ಲಿದ್ದ ಇಬ್ಬರು ಮಹಿಳೆಯರು ಪೊಲೀಸರನ್ನು ನಿಂದಿಸಿದ್ದಾರೆ, ಮತ್ತೆ ವೇಗದ ಡ್ರೈವಿಂಗ್ ಮೂಲಕ ಪರಾರಿಯಾಗಿದ್ದಾರೆ. ಕಾರಿನ ನೋಂದಣಿ ಸಂಖ್ಯೆ ಆಧಾರದ ಮೇಲೆ ಎರಡು ಗಂಟೆಗಳಲ್ಲೇ ಅವರಿಬ್ಬರನ್ನು ಜೆಬಿ ನಗರ ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.