ರಾಜ್ಯ

ಪಾದರಾಯನಪುರ ಘಟನೆ: 119 ಮಂದಿಯ ಬಂಧನ, ರಾಮನಗರ ಕಾರಾಗೃಹಕ್ಕೆ ಸ್ಥಳಾಂತರ- ಗೃಹ ಸಚಿವ ಬಸವರಾಜ ಬೊಮ್ಮಾಯಿ

ಪಾದರಾಯನಪುರ ಘಟನೆಗೆ ಸಂಬಂಧಿಸಿ ಇದುವರೆಗೆ 119 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯದ ಆದೇಶದ ಪ್ರಕಾರ ಅವರನ್ನೆಲ್ಲಾ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪಾದರಾಯನಪುರ ಘಟನೆ: 119 ಮಂದಿಯ ಬಂಧನ, ರಾಮನಗರ ಕಾರಾಗೃಹಕ್ಕೆ ಸ್ಥಳಾಂತರ- ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಪಾದರಾಯನಪುರ ಘಟನೆಗೆ ಸಂಬಂಧಿಸಿ ಇದುವರೆಗೆ 119 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯದ ಆದೇಶದ ಪ್ರಕಾರ ಅವರನ್ನೆಲ್ಲಾ ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿರುವ ಇಸ್ಕಾನ್ ಅಕ್ಷಯಪಾತ್ರ ಪ್ರತಿಷ್ಠಾನ ಹಾಗು ರಾಜ್ಯ ಸರ್ಕಾರದ ಉಚಿತ ಆಹಾರ ಪದಾರ್ಥಗಳ ವಿತರಣಾ ವಿಭಾಗಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಭೇಟಿ ನೀಡಿ, ಸಿವಿಲ್ ಡಿಫೆನ್ಸ್ ಕಾರ್ಯಕರ್ತರ ಮೂಲಕ ಮನೆಮನೆಗೆ ದಿನಸಿ  ಪದಾರ್ಥಗಳ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದರು.

ಬಂಧಿತರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ. ಆ ಕಾಯ್ದೆಯ ಪ್ರಕಾರ ಅವರನ್ನು ಮ್ಯಾಸಿಸ್ಟ್ರೇಟ್ ಮುಂದೆ ಹಾಜರು ಪಡಿಸುತ್ತೇವೆ. ಅಗತ್ಯವಾದರೆ ರಾಷ್ಟ್ರೀಯ ಭದ್ರತಾ ಕಾಯ್ದೆಯ‌ ಅನ್ವಯವೂ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಪರಿಸ್ಥಿತಿ  ನಿಯಂತ್ರಣದಲ್ಲಿದೆ. ಡೇಂಜರ್ ಝೋನ್ ನಲ್ಲಿರುವ ಎಲ್ಲ ಜಿಲ್ಲೆ ಮತ್ತು ಬೆಂಗಳೂರಿನ ಬಡಾವಣೆಗಳನ್ನು ಸೀಲ್ ಡೌನ್ ಮಾಡಲಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.