ಬ್ಯಾರಿಕೇಡ್ ಎಲ್ಲಿ? ಲಾಕ್ ಡೌನ್ ಉಲ್ಲಂಘಿಸಿದವರನ್ನು ಎಲ್ಲಿ ಪರಿಶೀಲಿಸಲಾಗುತ್ತಿದೆ: ಆಯುಕ್ತರಿಗೆ ಪ್ರವೀಣ್ ಸೂದ್ ಪ್ರಶ್ನೆ
ಬ್ಯಾರಿಕೇಡ್ ಗಳು ಎಲ್ಲಿ, ಕೊರೋನಾದಿಂದಾಗಿ ಲಾಕ್ ಡೌನ್ ಉಲ್ಲಂಘಿಸುತ್ತಿರುವವರ ವಿರುದ್ಧ ಎಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ಪ್ರಶ್ನಿಸಿದ್ದಾರೆ.

ಬೆಂಗಳೂರು: ಬ್ಯಾರಿಕೇಡ್ ಗಳು ಎಲ್ಲಿ, ಕೊರೋನಾದಿಂದಾಗಿ ಲಾಕ್ ಡೌನ್ ಉಲ್ಲಂಘಿಸುತ್ತಿರುವವರ ವಿರುದ್ಧ ಎಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ಪ್ರಶ್ನಿಸಿದ್ದಾರೆ.
ವಾಹನಗಳ ಚಲನೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ನಿನ್ನೆಯವರೆಗೂ ರಸ್ತೆಯಲ್ಲಿ ಬ್ಯಾರಿಕೇಡ್ ಗಳಿದ್ದಲು ಆದರೆ ಇದ್ದಕ್ಕಿದ್ದಂತೆ ಮಾಯವಾಗಿವೆ. ಜೊತೆಗೆ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳವ ಪೊಲೀಸರು ಎಲ್ಲಿದ್ದಾರೆ , ವಾಹನಗಳ ಪಾಸ್ ಎಲ್ಲಿ ಪರಿಶೀಲಿಸಲಾಗುತ್ತಿದೆ ಎಂದು ಆಯಕ್ತರಿಗೆ ಬರೆದ ಪತ್ರದಲ್ಲಿ ಡಿಜಿ ಪ್ರಶ್ನಿಸಿದ್ದಾರೆ.
ಪೊಲೀಸ್ ಠಾಣೆ ಮಟ್ಟದಲ್ಲಿ ನಿಜವಾದ ವಿನಂತಿಯನ್ನು ಹೊಂದಿರುವ ಜನರಿಗೆ ತುರ್ತು ಪಾಸ್ (ರಿಟರ್ನ್ ಮಾಡಬಹುದಾದ) ನೀಡಬೇಕು, ಕಚೇರಿ ಸಮಯದಲ್ಲಿ ಬೆಳಿಗ್ಗೆ ಮತ್ತು ಸಂಜೆ ಹೊರತುಪಡಿಸಿ, ಉಳಿದ ಸಮಯದಲ್ಲಿ ಜೀರೋ ಟ್ರಾಫಿಕ್ ನಿರ್ವಹಿಸಬೇಕು, ಅನಗತ್ಯವಾಗಿ ಸಂಚಾರ ನಡೆಸುವ ವಾಹನಗಳನ್ನು ಸೀಜ್ ಮಾಡಬೇಕೆಂದು ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


