ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ: ಮತ್ತೆ 60 ಮಂದಿ ಬಂಧನ- ಸರ್ಕಾರ ಮಾಹಿತಿ
ರಾಜಧಾನಿಯ ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 60 ಮಂದಿಯನ್ನು ಬಂಧನಕ್ಕೊಳಪಡಿಸಿಲಾಗಿದೆ.

ಬೆಂಗಳೂರು: ರಾಜಧಾನಿಯ ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 60 ಮಂದಿಯನ್ನು ಬಂಧನಕ್ಕೊಳಪಡಿಸಿಲಾಗಿದೆ.
ಪಾದರಾಯನಪುರದಲ್ಲಿ ಕೊರೋನಾ ವಾರಿಯರ್ಸ್ ಮೇಲಿನ ಗುಂಡಾಗಿರಿ ನಡೆಸಿದ್ದ ದುಷ್ಕರ್ಮಿಗಳ ವಿರುದ್ಧ ಕಾರ್ಯಾಚರಣೆಯನ್ನು ಪಶ್ಚಿಮ ವಿಭಾಗದ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದು, ಮಂಗಳವಾರ ಮತ್ತೆ ಅಪ್ರಾಪ್ತ ಬಾಲಕರು ಸೇರಿದಂತೆ 60 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
ಇದೇ ಪ್ರಕರಣದಲ್ಲಿ ಸೋಮವಾರ ಮಹಿಳೆ ಸೇರಿದಂತೆ 54 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದರು. ಈ ದೌರ್ಜನ್ಯ ಪ್ರಕರಣ ಸಂಬಂಧ 7 ಅಪ್ರಾಪ್ತ ಬಾಲಕರು, ಮಹಿಳೆಯರು ಸೇರಿ 119 ಹೆಚ್ಚು ಜನರನ್ನು ಪೊಲೀಸರು ಸೆರೆಹಿಡಿದಿದ್ದಾರೆ.
ಇದರಲ್ಲಿ ಫರ್ಜಿನಾ, ವಜೀದ್ ಸೇರಿದಂತೆ ನಾಲ್ವರನ್ನು ಹೆಚ್ಚಿನ ತನಿಖೆ ಸಲುವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನುಳಿದ 7 ಬಾಲಕರನ್ನು ಬಾಲಮಂದಿರಕ್ಕೆ ಕಳುಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


